ಮೀರತ್ : ಮಹಿಳೆಯ ಮೊಬೈಲ್ ಕದ್ದ ಕಳ್ಳನಿಗೆ ಸ್ಥಳೀಯರು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.
ಮಾರುಕಟ್ಟೆ ಪ್ರದೇಶದಲ್ಲಿ ಯುವಕ ಮಹಿಳೆಯ ಫೋನ್ ಕಸಿದು ಕೊಂಡು ಸ್ಥಳದಿಂದ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಆತ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಸ್ಥಳೀಯರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆ ನಡೆಸುತ್ತಿರುವ ಜನರೊಂದಿಗೆ ಸೇರಿ ಮೊಬೈಲ್ ಕಳೆದುಕೊಂಡು ಮಹಿಳೆ ಕೂಡ ಯುವಕನಿಗೆ ಥಳಿಸಿದ್ದಾಳೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹೊಡೆಯಬೇಡಿ ಎಂದು ಯುವಕ ಬೇಡಿಕೊಂಡರೂ, ಕ್ಷಮೆಯಾಚಿಸಿದರೂ, ಮಹಿಳೆ ಮತ್ತು ಜನರು ಹಲ್ಲೆ ನಡೆಸುತ್ತಲೇ ಇದ್ದರು. ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬೇಗಂಪುಲ್ ಬಳಿ ಈ ಘಟನೆ ನಡೆದಿದೆ. ಆರೋಪಿಯನ್ನು ಅರ್ಮಾನ್ ಎಂದು ಗುರುತಿಸಲಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296