ಮುಂಬೈ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಇತ್ತೀಚೆಗೆ ಹತ್ಯೆಗೀಡಾದ ಎನ್ ಸಿಪಿ ಮುಖಂಡ ಬಾಬಾ ಸಿದ್ದೀಕಿ ಅವರ ಪುತ್ರ, ಮುಂಬೈ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜೀಶನ್ ಸಿದ್ದೀಕಿ ಶುಕ್ರವಾರ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿಗೆ ಸೇರ್ಪಡೆಗೊಂಡಿದ್ದಾರೆ.
ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್ ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಇದನ್ನು ಭಾವನಾತ್ಮಕ ಕ್ಷಣ ಎಂದು ಕರೆದ ಜೀಶನ್, 2019 ರಲ್ಲಿ ಕಾಂಗ್ರೆಸ್ ಟಿಕೆಟ್ ನಲ್ಲಿ ಗೆದ್ದಿರುವ ಬಾಂದ್ರಾ ಪೂರ್ವ ಕ್ಷೇತ್ರದಿಂದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಯಿಂದ ಸ್ಪರ್ಧಿಸುವುದಾಗಿ ಹೇಳಿದರು.
ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ದಿನವಾಗಿದೆ. ಈ ಕಷ್ಟದ ಸಮಯದಲ್ಲಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಜಿತ್ ಪವಾರ್, ಪ್ರಫುಲ್ ಪಟೇಲ್, ಸುನೀಲ್ ತಟ್ಕರೆ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಪ್ರೀತಿಯಿಂದ ಮತ್ತು ಎಲ್ಲಾ ಜನರ ಬೆಂಬಲದಿಂದ ನಾನು ಖಂಡಿತವಾಗಿಯೂ ಬಾಂದ್ರಾ ಪೂರ್ವವನ್ನು ಮತ್ತೊಮ್ಮೆ ಗೆಲ್ಲುತ್ತೇನೆ, “ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296