nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲಶುದ್ಧಿ ಅಭಿಯಾನಕ್ಕೆ 135 ಕೋಟಿ ರೂ. ಅನುದಾನ: ಕೆಯುಐಡಿಎಫ್ ಸಿ ಎಂ.ಡಿ.
    ತುಮಕೂರು October 26, 2024

    ಜಲಶುದ್ಧಿ ಅಭಿಯಾನಕ್ಕೆ 135 ಕೋಟಿ ರೂ. ಅನುದಾನ: ಕೆಯುಐಡಿಎಫ್ ಸಿ ಎಂ.ಡಿ.

    By adminOctober 26, 2024No Comments2 Mins Read
    water

    ತುಮಕೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲಶುದ್ಧಿ ಅಭಿಯಾನದಡಿ ಕೊಳಚೆ ನೀರಿನ ಸಂಸ್ಕರಣಾ ವ್ಯವಸ್ಥೆ(FSTP), ಸ್ವಚ್ಛ ಭಾರತ್ ಮಿಷನ್(SBM) ಹಾಗೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(NGT)ಕ್ಕಾಗಿ ಒಟ್ಟು 135.23 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎಂದು ರಾಜ್ಯ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ(ಕೆಯುಐಡಿಎಫ್ ಸಿ)ದ ವ್ಯವಸ್ಥಾಪಕ ನಿರ್ದೇಶಕ ಶರತ್ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಹುಳಿಯಾರು ಹಾಗೂ ಕೊರಟಗೆರೆ ಪಟ್ಟಣ ಪಂಚಾಯತಿಯಲ್ಲಿ ಕೊಳಚೆ ನೀರಿನ ಸಂಸ್ಕರಣೆ ವ್ಯವಸ್ಥೆಗಾಗಿ ತಲಾ 3.50 ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ. ಅದೇ ರೀತಿ ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ತುಮಕೂರು ಮಹಾನಗರಪಾಲಿಕೆ ಹಾಗೂ ಶಿರಾ ನಗರಸಭೆ ಹೊರತುಪಡಿಸಿ ಜಿಲ್ಲೆಯ ಉಳಿದ ನಗರ ಸ್ಥಳೀಯ ಸಂಸ್ಥೆಗಳಿಗೆ 33.23 ಕೋಟಿ ರೂ. ಹಾಗೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಕಾರ್ಯಕ್ರಮದ ಅನುಷ್ಟಾನಕ್ಕಾಗಿ ಕುಣಿಗಲ್ ಪುರಸಭೆಗೆ 35 ಕೋಟಿ ರೂ., ತಿಪಟೂರು ನಗರಸಭೆಗೆ 10 ಕೋಟಿ ರೂ. ಮತ್ತು ತುಮಕೂರು ಮಹಾನಗರಪಾಲಿಕೆಗೆ 50 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
    ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸಂಸ್ಕರಿಸಿ ಜಲಮೂಲಗಳಿಗೆ ವಿಲೇ ಮಾಡಿ ಜಲಮಾಲಿನ್ಯವನ್ನು ತಡೆಗಟ್ಟುವುದು ನಗರ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ. ಯಾವುದೇ ರೀತಿಯಲ್ಲಿ ಸಂಸ್ಕರಿಸದ ಮಲದ ಕೆಸರು ಅಥವಾ ಬಳಸಿದ ನೀರನ್ನು ಪರಿಸರಕ್ಕೆ ಬಿಡದೆ ಎಲ್ಲಾ ಬಳಸಿದ ನೀರನ್ನು ಸುರಕ್ಷಿತವಾಗಿ ಸಂಗ್ರಹಿಸಿ, ಸಂಸ್ಕರಿಸಿ, ಸಾಗಿಸುವ ಮೂಲಕ ಬಳಸಿದ ನೀರಿನ ನಿರ್ವಹಣೆ ಮಾಡಬೇಕು. ಸಂಸ್ಕರಿಸಿದ ನೀರಿನ ಮರುಬಳಕೆಯೊಂದಿಗೆ ಸಂಸ್ಕರಿಸದ ತ್ಯಾಜ್ಯ/ಬಳಸಿದ ನೀರನ್ನು ಜಲಮೂಲಗಳಿಗೆ ಸೇರದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.


    Provided by
    Provided by

    ಕೊಳಚೆ ನೀರು ಉತ್ಪಾದನೆ ಮತ್ತು ಸಂಸ್ಕರಣೆ ನಡುವಿನ ಅಂತರ ಕಡಿಮೆ ಮಾಡಲು ಸರ್ಕಾರವು ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮವನ್ನು ಅನುಷ್ಟಾನ ಇಲಾಖೆಯನ್ನಾಗಿ ಗುರುತಿಸಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತವಾಗಿ ಶಿರಾ ನಗರಸಭೆ ಹೊರತುಪಡಿಸಿ ಉಳಿದ 10 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಅದೇ ರೀತಿ ಹುಳಿಯಾರು ಮತ್ತು ಕೊರಟಗೆರೆಯಲ್ಲಿ ಮಲ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ತಲಾ 3.5 ಕೋಟಿ ರೂ. ಮಂಜೂರು ಮಾಡಿ ಕಾರ್ಯಾದೇಶ ನೀಡಲಾಗಿದೆ. ಅಧಿಕಾರಿಗಳು ಘಟಕ ನಿರ್ಮಾಣಕ್ಕೆ ಸ್ಥಳ ಗುರುತಿಸಿ ತ್ವರಿತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂದು ಸೂಚನೆ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ಕೆಯುಐಡಿಎಫ್ ಸಿ ಮುಖ್ಯ ಇಂಜಿನಿಯರ್ ನಂದೀಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆಂಜಿನಪ್ಪ, ಪಾಲಿಕೆ ಆಯುಕ್ತ ಅಶ್ವಿಜ ಬಿ.ವಿ., ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.