ಶಿವಮೊಗ್ಗ: ಒಂದೇ ದಿನದಲ್ಲಿ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ನಡೆದಿದೆ.
ಚಿಕ್ಕಪೇಟೆನಗರದ ಭಾಷಾ ಎಂಬುವವರ ಮನೆ ಸಮೀಪ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಭಾಷಾ, ಅವರ ಪತ್ನಿ ಅಸ್ಮಾ , ಮಕ್ಕಳಾದ ಆರೀಪ್ , ಅನೀಫ್ , ಪಕ್ಕದ ಮನೆ ನಿವಾಸಿ ಯಾಸೀನ್ ಹಾಗೂ ಹಾಸಿಗೆ ರಿಪೇರಿಗಾಗಿ ತೆರಳಿದ್ದ ಹುಸೇನ್ ಸಾಬ್ , ಬಾಬಾ ಸಾಬ್ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಸೇನ್ ಸಾಬ್ (68) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹೊಸನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.
ಅದೇ ದಿನ ಮತ್ತೇ ರಾತ್ರಿ ಹೆಜ್ಜೇನು ಭಾಷಾ ಪುತ್ರ ಆರೀಫ್ ಮೇಲೆ ಮತ್ತೆ ದಾಳಿಸಿದೆ. ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


