ನವದೆಹಲಿ: ದೆಹಲಿಯಲ್ಲಿ ಭಾನುವಾರ ಗಾಳಿ ಗುಣಮಟ್ಟ ಸೂಚ್ಯಂಕವು 359 ದಾಖಲಾಗುವ ಮೂಲಕ ಮತ್ತೆ ಅತ್ಯಂತ ಕಳಪೆ ವರ್ಗಕ್ಕೆ ಸೇರಿದ್ದು, ವಾಯುಮಾಲಿನ್ಯ ಹೆಚ್ಚಾಗಿದೆ.
ಕಳೆದ ಎರಡು ದಿನಗಳಿಂದ ಸುಧಾರಿಸಿದ್ದ ಗಾಳಿಯ ಗುಣಮಟ್ಟವು ಶನಿವಾರ 255 ಎಕ್ಯೂಐ ಇತ್ತು. ಆದರೆ ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೆಚ್ಚಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ ತಿಳಿಸಿದೆ.
40 ಮೇಲ್ವಿಚಾರಣಾ ಕೇಂದ್ರಗಳ ಪೈಕಿ 36 ಕೇಂದ್ರಗಳ ಮಾಹಿತಿ ಹಂಚಿಕೊಂಡಿರುವ ಇಲಾಖೆ, 8 ಕೇಂದ್ರಗಳನ್ನು ಹೊರತುಪಡಿಸಿ ಉಳಿದ 28 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ಬಹಳ ಕಳಪೆಯಾಗಿದೆ ಎಂದು ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q