ಹೈದರಾಬಾದ್: ಮೊಮೊಸ್ ಸೇವಿಸಿ ಹಲವರು ಅಸ್ವಸ್ಥಗೊಂಡು ಓರ್ವ ಮಹಿಳೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹೈದರಾಬಾದ್ ನ ಬಂಜಾರ ಹಿಲ್ಸ್ ಪಿಎಸ್ ನಲ್ಲಿ ನಡೆದಿದೆ.
ರೇಷ್ಮಾ (29) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಈಕೆ ಸಿಂಗದಕುಂಟಾ ಬಸ್ತಿಯ ನಿವಾಸಿಯಾಗಿದ್ದಾಳೆ. ಮೊಮೊಸ್ ತಿಂದ ಬಳಿಕ ರೇಷ್ಮಾ ಅಸ್ವಸ್ಥಗೊಂಡಿದ್ದರು. ಹೀಗಾಗಿ ಮನೆಯವರು ನಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಇಲ್ಲಿನ ನಂದಿನಗರದಲ್ಲಿ ವಾರದ ಸಂತೆಯಲ್ಲಿ ಬೀದಿಬದಿ ವ್ಯಾಪಾರಿಯ ಬಳಿ ರೇಷ್ಮಾ ಮೊಮೊಸ್ ಖರೀದಿಸಿ ಸೇವನೆ ಮಾಡಿದ್ದರು. ಬಳಿಕ ಅವರು ಅಸ್ವಸ್ಥಗೊಂಡಿದ್ದರು. ರೇಷ್ಮಾ ಮಾತ್ರವಲ್ಲದೇ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ಪೈಕಿ 10 ಅಪ್ರಾಪ್ತ ವಯಸ್ಸಿನ ಮಕ್ಕಳು ಎಂದು ಹೇಳಲಾಗಿದೆ.
ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೊಮೊಸ್ ಮಾರಾಟ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಮೋಮಸ್ ಹೇಗೆ ತಯಾರಿಸಲಾಗಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296