ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾ ನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನವೆಂಬರ್ 18ರಂದು ಆಚರಿಸಲಾಗುವ “ಸಂತ ಶ್ರೇಷ್ಠ ಕನಕದಾಸರ ಜಯಂತ್ಯುತ್ಸವ” ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕುರುಬ ಸಮುದಾಯದ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸ್ವ ಬರಹದ ಅರ್ಜಿಯನ್ನು ನವೆಂಬರ್ 8ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ, ಬಾಳನಕಟ್ಟೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2275204ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q