nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ತಂಡ ಭೇಟಿ, ಪರಿಶೀಲನೆ
    ಕೊರಟಗೆರೆ October 31, 2024

    ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ತಂಡ ಭೇಟಿ, ಪರಿಶೀಲನೆ

    By adminOctober 31, 2024No Comments2 Mins Read
    sanjivini

    ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿ, ತಾಲ್ಲೂಕಿನಲ್ಲಿ ಅನುಷ್ಠಾನಗೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಮೇಲ್ವಿಚಾರಣೆ ನಡೆಸಿದರು.

    ಕೇಂದ್ರ ತಂಡವು ಕೊರಟಗೆರೆ ತಾಲ್ಲೂಕು ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 17.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಎನ್‌ಆರ್‌ಎಲ್‌ಎಂ ಸಂಜೀವಿನಿ ಘಟಕಕ್ಕೆ ಭೇಟಿ ನೀಡಿ, ಘಟಕವನ್ನು ವೀಕ್ಷಿಸಿದರು.


    Provided by
    Provided by

    ನಂತರ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 48 ಮಹಿಳಾ ಸ್ವಸಹಾಯ ಸಂಘಗಳ ಸುಮಾರು 450ಕ್ಕೂ ಅಧಿಕ ಸದಸ್ಯರು ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ಈವರೆಗೆ 45 ಲಕ್ಷ ರೂ.ಗಳ ಸಾಲ ಸೌಲಭ್ಯ ಪಡೆದು, 1.27 ಕೋಟಿ ರೂ.ಗಳ ವಹಿವಾಟು ನಡೆಸಿರುವ ಬಗ್ಗೆ ಶ್ರೀ ಕಾವೇರಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರೊಂದಿಗೆ ಸಂವಾದ ನಡೆಸಿದರು.

    ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಲಕ್ಷ್ಮೀ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ಸಿದ್ಧಪಡಿಸಿದ ಹಪ್ಪಳ, ಮಸಾಲ ಪದಾರ್ಥಗಳು, ವಿವಿಧ ಬಗೆಯ ಚಟ್ನಿಪುಡಿ ಹಾಗೂ ಸಿರಿಧಾನ್ಯ ಮಾಲ್ಟ್ಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವೀಕ್ಷಿಸಿದರು. ಇದೇ ವೇಳೆ ಶ್ರೀ ಲಕ್ಷ್ಮೀ ಸ್ತ್ರಿಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಯೋಜನೆಯಡಿ ಸಬ್ಸಿಡಿ ದರದಲ್ಲಿ ಹಪ್ಪಳ ತಯಾರಿಕಾ ಯಂತ್ರವನ್ನು ಖರೀದಿಸಿದ್ದು, ಯಂತ್ರದ ಮೂಲಕ ಹಪ್ಪಳ ತಯಾರಿಸುವ ಪ್ರಕ್ರಿಯೆಯನ್ನು ವೀಕ್ಷಿಸಿದರು.

    ಬಳಿಕ ಇರಕಸಂದ್ರ ಕಾಲೋನಿ ವೃತ್ತದಲ್ಲಿ ಏರ್ಪಡಿಸಿದ್ದ ಮಾಸಿಕ ಸಂತೆ ಮೇಳಕ್ಕೆ ಭೇಟಿ ನೀಡಿದ ಕೇಂದ್ರ ತಂಡವು ಕೊರಟಗೆರೆ ತಾಲ್ಲೂಕಿನ ಎನ್ ಆರ್ ಎಲ್ ಎಂ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವೀಕ್ಷಿಸಿದರು. ಸ್ವಸಹಾಯ ಸಂಘದ ಸದಸ್ಯರು ತಯಾರಿಸುವ ಎಲ್ಲಾ ಉತ್ಪನ್ನಗಳಿಗೂ ಏಕರೂಪದ ಬ್ರಾಂಡಿಂಗ್ ಮಾಡಿಸಿ ವ್ಯಾಪಾರ ವಹಿವಾಟು ನಡೆಸುವಂತೆ ಜಿಪಿಎಲ್‌ಎಫ್ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸೂಚಿಸಿದರು.

    ಆ ನಂತರ ಇರಕಸಂದ್ರ ಕಾಲೋನಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 9.40 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡ ಭೋಜನಾಲಯ ಹಾಗೂ 5.20 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡ ಬಾಸ್ಕೆಟ್‌ಬಾಲ್ ಅಂಕಣ ಕಾಮಗಾರಿಯನ್ನು ವೀಕ್ಷಿಸಿದರು.
    ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತ ಪವನ್‌ಕುಮಾರ್ ಮಾಲಪಾಟಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ದಿಡ್ಡಿಮನಿ, ಎನ್‌ಆರ್‌ಎಲ್‌ಎಂ ವ್ಯವಸ್ಥಾಪಕ ನಿರ್ದೇಶಕ ಶ್ರೀವಿದ್ಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು.ಜಿ, ಉಪ ಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಯ್ಯ, ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ.ಅನಂತರಾಮು, ತಹಶೀಲ್ದಾರ್ ಮಂಜುನಾಥ್, ಸಹಾಯಕ ನಿರ್ದೇಶಕ(ಗ್ರಾ.ಉ.) ಗುರುಮೂರ್ತಿ, ತಾಲ್ಲೂಕು ಯೋಜನಾಧಿಕಾರಿ ಮಧುಸೂದನ್, ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾರ್ವತಮ್ಮ, ಉಪಾಧ್ಯಕ್ಷ ರಮ್ಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ನರೇಗಾ ತಾಲ್ಲೂಕು ತಾಂತ್ರಿಕ ಸಂಯೋಜಕ ಮಧು, ತಾಂತ್ರಿಕ ಸಹಾಯಕ ದಿಲೀಪ್, ಪಿಡಿಒ ಮಂಜುಳ, ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.