nammatumakuru

    Subscribe to Updates

    Get the latest creative news from FooBar about art, design and business.

    What's Hot

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026
    Facebook Twitter Instagram
    ಟ್ರೆಂಡಿಂಗ್
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಥಪೂರ್ಣ ಶತಮಾನೋತ್ಸವ ಆಚರಣೆ: ಸಚಿವ ಎಚ್.ಕೆ.ಪಾಟೀಲ
    ರಾಜ್ಯ ಸುದ್ದಿ November 5, 2024

    ಅರ್ಥಪೂರ್ಣ ಶತಮಾನೋತ್ಸವ ಆಚರಣೆ: ಸಚಿವ ಎಚ್.ಕೆ.ಪಾಟೀಲ

    By adminNovember 5, 2024No Comments3 Mins Read
    congress

    ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ತಿಳಿಸಿದರು.
    ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ(ನ.5) ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು.

    ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು. ಎಲ್ಲ ವಿವಿ ಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ಪೂರ್ಣಗೊಳಿಸಬೇಕಿದೆ ಎಂದರು.

    ರಚನಾತ್ಮಕ ಕಾರ್ಯಕ್ರಮ ಆಯೋಜನೆ:

    ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧೀವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು ಎಂದು ಪಾಟೀಲ ತಿಳಿಸಿದರು.

    ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು.

    ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ. ಅಂತರರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ.

    ಬೆಳಗಾವಿ ಅಧಿವೇಶನ ಕುರಿತು ಸ್ಥಳೀಯ ನಾಟಕಕಾರರು ಒಂದು ವಿಶೇಷ ನಾಟಕವನ್ನು ರಚಿಸುವಂತೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

    ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ವೀರಪ್ಪ ಮೊಯ್ಲಿ ಅವರು, ಶತಮಾನೋತ್ಸವ ಸ್ಮರಣೀಯವಾಗಿಸಲು ಶತಮಾನೋತ್ಸವ ಉದ್ಯಾನ ಮತ್ತು ಭವನ ನಿರ್ಮಾಣ ಮಾಡಬೇಕಿದೆ ಎಂದರು.

    ಇದಲ್ಲದೇ ಮಹಾತ್ಮಾ ಗಾಂಧಿ ಪುತ್ಥಳಿ ನಿರ್ಮಾಣ; ಅಧಿವೇಶನ ಸ್ಥಳದಲ್ಲಿ ಗಾಂಧಿ ಸ್ಮಾರಕ; ಛಾಯಾಚಿತ್ರ ಹಾಗೂ ವಸ್ತುಪ್ರದರ್ಶನ ಹಾಗೂ ಖಾಯಂ ಮ್ಯೂಸಿಯಂ ಸ್ಥಾಪಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.
    ಶತಮಾನೋತ್ಸವ ಅಂಚೆ ಚೀಟಿ ಬಿಡುಗಡೆ; ಬೆಳಗಾವಿಯಲ್ಲಿ ವಿಚಾರಸಂಕಿರಣ ರೂಪುರೇಷೆ ಸಿದ್ಧಪಡಿಸಬೇಕು ಮತ್ತು ಶತಮಾನೋತ್ಸವ ಸಂದರ್ಭದಲ್ಲಿ ವಿವಿಧ ಸಮ್ಮೇಳನ ಹಮ್ಮಿಕೊಳ್ಳಲು ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

    ಶತಮಾನೋತ್ಸವ ಸಮಿತಿಯ ಸಂಚಾಲಕರಾದ ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ ಅವರು, ಅಧಿವೇಶನದ ಶತಮಾನೋತ್ಸವವು ಒಂದು ವರ್ಷದ ಕಾರ್ಯಕ್ರಮ. ಮುಂದಿನ ಅಕ್ಟೋಬರ್ 2 ರವರೆಗಿನವರೆಗೆ ಅಳವಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.

    ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್, ದೇಶಪಾಂಡೆ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ರವೀಂದ್ರ ದೇಶಪಾಂಡೆ, ಪ್ರೊ.ಮರಾಠೆ, ನಿಲೇಶ್ ಬೇನಾಳ ಮತ್ತಿತರರು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಸಲಹೆಗಳನ್ನು ನೀಡಿದರು.

    ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಬೆಳಗಾವಿ ಉತ್ತರ ಶಾಸಕರಾದ ಆಸಿಫ್ (ರಾಜು) ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಓ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಸಮಿತಿಯ ಸದಸ್ಯರಾದ ಎನ್.ಆರ್.ವಿಶುಕುಮಾರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

    ಅಧಿವೇಶನ ಸ್ಥಳ; ಹುದಲಿ ಭೇಟಿ:

    ಸಭೆಯ ಬಳಿಕ ಸಮಿತಿಯ ಅಧ್ಯಕ್ಷರು, ಗೌರವ ಅಧ್ಯಕ್ಷರು, ಸಂಚಾಲಕರು, ಸದಸ್ಯರು ಕಾಂಗ್ರೆಸ್ ಅಧಿವೇಶನನಡೆದ ಸ್ಥಳವಾದ ಟಿಳಕವಾಡಿ, ವೀರಸೌಧಕ್ಕೆ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನ ಹಾಗೂ ಕಾಂಗ್ರೆಸ್ ಬಾವಿಯನ್ನು ವೀಕ್ಷಿಸಿ, ಜಿಲ್ಲಾಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

    ನಂತರ ಲೆಲೆ ಮೈದಾನ, ಸಿಪಿಎಡ್ ಮೈದಾನ; ಕಣಬರಗಿಯಲ್ಲಿರುವ ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಮತ್ತು ಹುದಲಿಯಲ್ಲಿರುವ ಮಹಾತ್ಮಾ ಗಾಂಧೀಜಿ ಸ್ಮಾರಕವನ್ನು ವೀಕ್ಷಿಸಿದರು.

    ಈ ಸಂದರ್ಭದಲ್ಲಿ 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಎಚ್.ಕೆ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಗೌರವ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಸಮಿತಿಯ ರಾಜ್ಯ ಸಂಚಾಲಕರಾದ ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ, ಸದಸ್ಯರಾದ ಎನ್.ಆರ್.ವಿಶುಕುಮಾರ್, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸಿಫ್(ರಾಜು) ಸೇಠ್, ವಿನಯ ನಾವಲಗಟ್ಟಿ, ಶಿವನಗೌಡ ಪಾಟೀಲ, ರಮೇಶ ಜನಗಲ, ರಾಮಕೃಷ್ಣ ಮರಾಠೆ, ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾದಂತೆ ಸೈಬರ್ ವಂಚನೆಯ ಪ್ರಕರಣಗಳೂ ಆತಂಕ ಮೂಡಿಸುತ್ತಿವೆ. ವಾಟ್ಸ್‌ಆಯಪ್ ಮೂಲಕ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ, ಸರ್ಕಾರಿ…

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.