ಬೀದರ್: ಕಮಲನಗರ ಪೊಲೀಸರಿಂದ ಬೀಟ್ ಮಟ್ಟದ ರಸ್ತೆ ಸುರಕ್ಷತಾ ಸಪ್ತಾಹ–2024 ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು.
ಕಮಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಿಎಸ್ ಐ ಚಂದ್ರಶೇಖರ ತಮ್ಮ ಸಿಬ್ಬಂದಿರವರೊಂದಿಗೆ ಕಮಲ ನಗರದಲ್ಲಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಬೀದರ ಜಿಲ್ಲಾ ಪೊಲೀಸರು ಸದಾ ಪ್ರಯತ್ನಿಸುತ್ತಿದ್ದು, ಈ ಪ್ರಯತ್ನವು ಪ್ರಸಂಶನಿಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಸಹಕರಿಸಲು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಕೋರಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


