ತುಮಕೂರು: ಕೆ.ಎಫ್.ಸಿ.ಎಫ್ ಸಿ ಸಗಟು ಮಳಿಗೆ ವ್ಯವಸ್ಥಾಪಕ ರವಿಕುಮಾರ್ (59)ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯ ಒಂಕಾರ್ ಆಸ್ಪತ್ರೆ ಹಿಂಬಾಗದ ಕಟ್ಟಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ಅನೇಕ ದಿನಗಳಿಂದ ವಾಸವಾಗಿದ್ದರು. ಬೆಳಿಗ್ಗೆ ಪೋನ್ ರಿಸೀವ್ ಮಾಡದ ಕಾರಣ ಮನೆಯ ಬಳಿ ಬಂದು ನೋಡಿದಾಗ ಮನೆಯ ಪ್ಯಾನ್ ಗೆ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಟ್ಟಣದ ಪೋಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ತುರುವೇಕೆರೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q