nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026
    Facebook Twitter Instagram
    ಟ್ರೆಂಡಿಂಗ್
    • ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
    • ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕೆಎಸ್ ಆರ್ ಟಿಸಿ ನಿಲ್ದಾಣದಲ್ಲಿ ಬಾಲಕನಿಂದ ಮಲ ಬಾಚಿಸಿದ ಘಟನೆ: ಮಾನವ ಹಕ್ಕುಗಳ ಆಯೋಗಕ್ಕೆ ದೂರು
    ಜಿಲ್ಲಾ ಸುದ್ದಿ November 8, 2024

    ಕೊರಟಗೆರೆ: ಕೆಎಸ್ ಆರ್ ಟಿಸಿ ನಿಲ್ದಾಣದಲ್ಲಿ ಬಾಲಕನಿಂದ ಮಲ ಬಾಚಿಸಿದ ಘಟನೆ: ಮಾನವ ಹಕ್ಕುಗಳ ಆಯೋಗಕ್ಕೆ ದೂರು

    By adminNovember 8, 2024No Comments2 Mins Read
    ksrtc

    ತುಮಕೂರು: ಜಿಲ್ಲೆ ಕೊರಟಗೆರೆ  ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯದ ಗುಂಡಿ ತುಂಬಿ ಹರಿಯುತ್ತಿದ್ದನ್ನು ಪರಿಶಿಷ್ಟ ಪಂಗಡದ ಬಾಲಕನಿಂದ ಮಲವನ್ನು ಸ್ವಚ್ಛ ಗೊಳಿಸುತ್ತಿರುವ ವಿಷಯದ ಬಗ್ಗೆ ನೈಜ ಹೋರಾಟಗಾರರ ವೇದಿಕೆ ಬೆಂಗಳೂರು, ಮಾನವ ಹಕ್ಕುಗಳ ಆಯೋಗಕ್ಕೆ ಇ–ಮೇಲ್ ಮೂಲಕ ದೂರು ನೀಡಿದೆ.

    ತುಮಕೂರು ಜಿಲ್ಲೆ ಕೊರಟಗೆರೆ  ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯದ ಗುಂಡಿ ತುಂಬಿ ಹರಿಯುತ್ತಿದ್ದನ್ನು ಪರಿಶಿಷ್ಟ ಪಂಗಡದ ಬಾಲಕನೂರ್ನಿಂದ ಮಲವನ್ನು ಸ್ವಚ್ಛ ಗೊಳಿಸುತ್ತಿರುವ ವಿಷಯದ ಬಗ್ಗೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಸುದ್ದಿ ಪ್ರಸಾರವಾಗಿದೆ.


    Provided by
    Provided by

    ನಾವು 21ನೇ ಶತಮಾನಕ್ಕೆ  ಅಭಿವೃದ್ಧಿ ಹೊಂದಿದ ದೇಶಗಳ ಜೊತೆ ಮೊದಲ ಸಾಲಿನಲ್ಲಿ ನಿಂತಿರುವ ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಇಂಥ ಹೀನಾಯ ವಾದ ಕೃತ್ಯ ಕರ್ನಾಟಕ ರಾಜ್ಯ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿರುವುದು ದುರಾದೃಷ್ಟಕರ ಸಂಗತಿಯಾಗಿದೆ.

    ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತುಮಕೂರು ಜಿಲ್ಲಾ ಘಟಕವು ಸ್ಪಷ್ಟನೆಯನ್ನು ನೀಡಿದೆ.

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಕೇಂದ್ರ ಕಚೇರಿಯ ನಿರ್ದೇಶನದಂತೆ ಕೊರಟಗೆರೆ ಬಸ್ ನಿಲ್ದಾಣದ ಸ್ವಚ್ಛತಾ ಕಾರ್ಯಕ್ಕೆ ಲಕ್ಷ್ಮಿ ಎಂಟರ್ಪ್ರೈಸಸ್ ಇವರಿಗೆ ಟೆಂಡರ್ ಅನ್ನು ನೀಡಿದ್ದು ನೇರವಾಗಿ ನಾವು ಯಾವುದೇ ಸ್ವಚ್ಛತಾ ಕಾರ್ಯವನ್ನು ಮಾಡುತ್ತಿಲ್ಲವೆಂದು ತಿಳಿಸಿದ್ದಾರೆ .

    ಬಹಳ ಮುಖ್ಯವಾಗಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಪ್ರತಿಕ್ರಿಯೆಗೆ ಮತ್ತು ಸಮರ್ಥನೆಗೆ ಮುಂದಾದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ತುಮಕೂರು ಘಟಕವು ಏನು ತಪ್ಪು ಮಾಡಿಲ್ಲ ಎಂಬಂತೆ ಸಮರ್ಥಿಸಿಕೊಳ್ಳುತ್ತಿದೆ.

    ಇಲ್ಲಿ ಗಮನಿಸಬೇಕಾದ ಅಂಶವೆಂದರೆ 10 ವರ್ಷದ ಪರಿಶಿಷ್ಟ ಪಂಗಡದ ಬಾಲಕನಿಗೆ ಮಲಗುಂಡಿಯಲ್ಲಿ ಸ್ವಚ್ಛತೆ ಕಾರ್ಯಕ್ಕೆ ನಿಯೋಜಿಸಿರುವ ಗುತ್ತಿಗೆ ಪಡೆದ ಗುತ್ತಿಗೆದಾರರು ಮತ್ತು ಇವರಿಗೆ ಗುತ್ತಿಗೆ ನೀಡಿದ ತುಮಕೂರು ಜಿಲ್ಲಾ ಘಟಕದ ರಸ್ತೆ ಸಾರಿಗೆ ನಿಗಮದ ತುಮಕೂರು ಜಿಲ್ಲಾ ಘಟಕದ ಅಧಿಕಾರಿಗಳು ತಮ್ಮ ಬೇಜವಾಬ್ದಾರಿತನದಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದರೂ ಸಹ  ಈ ಕೃತ್ಯ ನಡೆದಿಲ್ಲವೆಂಬಂತೆ ಬಿಂಬಿಸಲು ಮತ್ತು ಈ ಪ್ರಕರಣವನ್ನು ಮುಚ್ಚಿ ಹಾಕಲು ಜಿಲ್ಲಾಡಳಿತ ಮತ್ತು ಇನ್ನಿತರ ಪಟ್ಟ ಭದ್ರ ಹಿತಾಸಕ್ತಿಗಳು ಕಾರ್ಯಪ್ರವೃತ್ತ ರಾಗಿ ಇರುವುದು ನಮಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ.

    ಈ ಪ್ರಕರಣವು ಪೂರ್ಣ ಪ್ರಮಾಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು ತಪ್ಪಿತಸ್ಥ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಮೇಲೆ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ನೈಜ್ಯ ಹೋರಾಟಗಾರರ ವೇದಿಕೆಯು ಈ ಮೂಲಕ ತಮ್ಮಲ್ಲಿ ವಿನಯ ಪೂರ್ವಕವಾದ ಆಗ್ರಹವನ್ನು ಪಡಿಸುತ್ತಿದೆ.

    ಇಡೀ ಜಿಲ್ಲೆಗೆ ಇದರಿಂದ ಕೆಟ್ಟ ಹೆಸರು ಬರುತ್ತದೆ ಎಂದು ಪ್ರಭಾವಿ ರಾಜಕಾರಣಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಈ ಪ್ರಕರಣವನ್ನು  ಮುಚ್ಚಿಹಾಕಿ ಈ ಪ್ರಕರಣ ನಡೆದೇ ಇಲ್ಲ ಎಂಬ ಬಗ್ಗೆ ಬಿಂಬಿಸಲು ಪ್ರಯತ್ನ ಪಡುತ್ತಿದ್ದಾರೆ ಎಂಬ ವಿಷಯ ಮೇಲ್ನೋಟಕ್ಕೆ ನಮಗೆ ಕಂಡು ಬಂದಿದೆ ಆದುದರಿಂದ ಈ ಪ್ರಕರಣವನ್ನು ಆಯೋಗವು ಗಂಭೀರವಾಗಿ ಪರಿಗಣಿಸಿ ಯಾವುದೇ ರೀತಿಯ ಒತ್ತಡವಿದ್ದರೂ ಸಹ ಅದಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ನಮ್ಮ ಕೋರಿಕೆಯಾಗಿದೆ ಎಂದು ದೂರಿನಲ್ಲಿ ನೈಜ ಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಕುಣಿಗಲ್ ನರಸಿಂಹಮೂರ್ತಿ, ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಎಚ್.ಎಸ್. ಸ್ವಾಮಿ ಒತ್ತಾಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ತುಮಕೂರು/ಮಧುಗಿರಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಹಸನದ ಕುರಿತು  ಕೆ.ಎನ್. ರಾಜಣ್ಣ ಅವರು…

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.