ಲಕ್ನೋ: ಉತ್ತರ ಪ್ರದೇಶ ರಾಜ್ಯದಲ್ಲಿ ಮಹತ್ವದ ಆದೇಶವೊಂದನ್ನು ತರಲಾಗಿದ್ದು, ಬೊಟಿಕ್ ಸೆಂಟರ್ ಗಳಲ್ಲಿ ಮಹಿಳೆಯರ ಬಟ್ಟೆಗಳ ಅಳತೆಯನ್ನು ಪುರುಷರ ಬದಲಿಗೆ ಮಹಿಳೆಯರೇ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಈ ಬಗ್ಗೆ ಎಲ್ಲ ಜಿಲ್ಲೆಗಳಿಗೂ ಆದೇಶ ಹೊರಡಿಸಲಾಗುದ್ದು, ಪುರುಷ ಟೈಲರ್‌ಗಳು ಮಹಿಳೆಯರ ಅಳತೆಗಳನ್ನು ತೆಗೆಯೋಹಾಗಿಲ್ಲ ಎಂದು ಕಟ್ಟನಿಟ್ಟಾಗಿ ಸೂಚನೆ ನೀಡಲಾಗಿದೆ.
ಟೈಲರ್ ಅಂಗಡಿಯಲ್ಲಿ ಮಹಿಳೆಯರ ಅಳತೆಗಳನ್ನು ತೆಗೆದುಕೊಳ್ಳಲು ಮಹಿಳಾ ಟೈಲರ್ ಗಳನ್ನು ನೇಮಿಸಬೇಕಾಗುತ್ತದೆ. ಇಷ್ಟು ಮಾತ್ರವಲ್ಲದೇ ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮಹಿಳೆಯರಿಗಾಗಿ ವಿಶೇಷ ಬಟ್ಟೆಗಳನ್ನು ಮಾರಾಟ ಮಾಡುವ ಮಳಿಗೆಗಳು ಗ್ರಾಹಕರಿಗೆ ಸಹಾಯ ಮಾಡಲು ಮಹಿಳಾ ಉದ್ಯೋಗಿಗಳನ್ನು ನೇಮಿಸಬೇಕಾಗುತ್ತದೆ. ಕೋಚಿಂಗ್ ಸೆಂಟರ್ ನಲ್ಲಿಯೂ ಮಹಿಳೆಯರಿಗೆ ಸಿಸಿಟಿವಿ ಮತ್ತು ಶೌಚಾಲಯಗಳನ್ನು ಹೊಂದಿರುವುದು ಅವಶ್ಯಕ. ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಎಲ್ಲಾ ನಿಯಮಗಳನ್ನು ನಿರ್ಧರಿಸಲಾಗಿದೆ ಎಂದು ಸೂಚಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296