ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ರಸ್ತೆಯ ಸಿದ್ಧಾಪುರ ಗ್ರಾಮದಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಊಟದ ತಟ್ಟೆ ಮತ್ತು ನೀರಿನ ಲೋಟ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
ಚಿತ್ರದುರ್ಗ ಜಿಲ್ಲೆಯ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಡಾ.ಆರ್.ಕೋದಂಡರಾಮ್.M.B.A. ಅವರ ಮಾರ್ಗದರ್ಶನದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಿ.ಎಮ್., ಜಿಲ್ಲಾ ಕಾರ್ಯದರ್ಶಿ ಟಿ.ಸಿ.ಚಂದ್ರಣ್ಣ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ಮೊಹಮ್ಮದ್ ರಫಿ, ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ದಾದಾಪೀರ್.ಎಸ್., ತಾಲ್ಲೂಕು ಉಪಾಧ್ಯಕ್ಷರಾದ ದುರ್ಗೇಶ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy