nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನು ಅರಿವಿದ್ದವರಿಂದಲೇ ಕಾನೂನು ಉಲ್ಲಂಘನೆ: ನ್ಯಾ.ಜಯಂತ  ಕುಮಾರ್ ಬೇಸರ
    ತುಮಕೂರು November 10, 2024

    ಕಾನೂನು ಅರಿವಿದ್ದವರಿಂದಲೇ ಕಾನೂನು ಉಲ್ಲಂಘನೆ: ನ್ಯಾ.ಜಯಂತ  ಕುಮಾರ್ ಬೇಸರ

    By adminNovember 10, 2024No Comments2 Mins Read
    kanunu

    ತುಮಕೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯ ಹಳ್ಳಿ–ಹಳ್ಳಿಗಳಿಗೆ ಭೇಟಿ ನೀಡಿ ಜನರಲ್ಲಿ ಕಾನೂನು ಅರಿವು ಮೂಡಿಸಲಾಗುತ್ತಿದೆಯಾದರೂ ಜನರಲ್ಲಿ ಇನ್ನೂ ಕಾನೂನು ಪ್ರಜ್ಞೆ ಬಂದಿಲ್ಲ.  ಆದರೆ ಕಾನೂನು ಅರಿವಿದ್ದವರು ಕಾನೂನು ಉಲ್ಲಂಘನೆಯಲ್ಲಿ ತೊಡಗಿಕೊಳ್ಳುವುದು ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್ ತಿಳಿಸಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ   ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾನೂನು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನು ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿಯುವ ಜೊತೆ ಜೊತೆಗೆ ಅನುಭವಾತ್ಮಕ ಕಲಿಕೆಯನ್ನೂ ಹೊಂದಬೇಕು.  ಕಾನೂನಿನ ವ್ಯಾಖ್ಯಾನವನ್ನು ಅರ್ಥಮಾಡಿಕೊಂಡಾಗ ಮಾತ್ರ ತಮ್ಮ ಕಕ್ಷಿದಾರರಿಗೆ ನ್ಯಾಯ ದೊರೆಕಿಸಿಕೊಡಲು ಸಾಧ್ಯ.  ನ್ಯಾಯಾಲಯದಲ್ಲಿ ವಾದ ಮಂಡಿಸುವ ಮುನ್ನ ವ್ಯಾಜ್ಯ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ, ಪುರಾವೆಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಬೇಕು.  ಪೂರ್ವಸಿದ್ಧತೆಗಳಿಲ್ಲದೆ ವಾದ ಮಂಡಿಸಲು ಸಾಧ್ಯವಿಲ್ಲವೆಂದರಲ್ಲದೆ ವಿದ್ಯಾರ್ಥಿ ಜೀವನದಲ್ಲಿ ಪಠ್ಯದೊಂದಿಗೆ ಆಧ್ಯಾತ್ಮಿಕತೆಯನ್ನು ರೂಢಿಸಿಕೊಳ್ಳಬೇಕು.  ಇದರಿಂದ ತಾಳ್ಮೆ, ಸಹನೆ, ಕ್ರಿಯಾಶೀಲತೆ ಹೆಚ್ಚುತ್ತದೆ.  ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ.  ಈ ನಿಟ್ಟಿನಲ್ಲಿ ಶ್ರದ್ಧೆಯಿಂದ ಕಲಿತು ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡುವ ಕಾರ್ಯ ಮಾಡಬೇಕು ಎಂದು ಭಾವಿ ವಕೀಲರಿಗೆ ಕಿವಿ ಮಾತು ಹೇಳಿದರು.

    ಕಕ್ಷಿದಾರರ ವ್ಯಾಜ್ಯಗಳಿಗೆ ಕಾರಣಗಳನ್ನು ತಿಳಿದಾಗ ಮಾತ್ರ ಪ್ರಕರಣಗಳ ಇತ್ಯರ್ಥಕ್ಕೆ ಸುಲಭವಾಗುತ್ತದೆ.  ಎಲ್ಲ ವ್ಯಾಜ್ಯ ಪ್ರಕರಣಗಳನ್ನು ಒಂದೇ ರೀತಿಯಲ್ಲಿ ವ್ಯಾಖ್ಯಾನಿಸಲು ಸಾಧ್ಯವಿಲ್ಲ.  ವಕೀಲರು ವ್ಯಾಜ್ಯಗಳ ಹಿನ್ನೆಲೆ, ಕಾರಣಗಳನ್ನು ಅರ್ಥ ಮಾಡಿಕೊಂಡು ಪ್ರಕರಣಗಳನ್ನು ನಡೆಸಬೇಕು.  ಹಣದಾಸೆಗೆ ಕೆಲವೊಮ್ಮೆ ದಾಖಲೆಗಳು ಕಕ್ಷಿದಾರರ ವಿರುದ್ಧವಿದ್ದರೂ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗುತ್ತದೆ.  ವಕೀಲರು ತನ್ನ ಕಕ್ಷಿದಾರನಿಗೆ ನ್ಯಾಯ ದೊರಕಿಸಿಕೊಟ್ಟಾಗ ಮಾತ್ರ ಕಾನೂನು ಕಲಿಕೆ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

    ರಾಜ್ಯದಲ್ಲಿ ೧೯೯೫ರ ನವೆಂಬರ್ ೯ರಂದು ಕಾನೂನು ಸೇವಾ ಪ್ರಾಧಿಕಾರ ಜಾರಿಗೆ ಬಂದಿದ್ದು, ಪ್ರಾಧಿಕಾರದಿಂದ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಲಾಗುತ್ತಿದೆ.  ಹಲವಾರು  ವರ್ಷಗಳಿಂದ  ಇತ್ಯರ್ಥವಾಗದ ವ್ಯಾಜ್ಯ ಪ್ರಕರಣಗಳನ್ನು   ಲೋಕ್ ಅದಾಲತ್ ಮೂಲಕ    ಇತ್ಯರ್ಥಪಡಿಸಲಾಗುತ್ತಿದೆ ಎಂದು ಕಾನೂನು ಸೇವಾ ಪ್ರಾಧಿಕಾರದ ಕಾರ್ಯವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಸೇವೆ ಸಿಗಬೇಕು. ಕಾನೂನು ಅರಿವಿನ ಕೊರತೆಯಿಂದ ಅಮಾಯಕರು ಬಲಿಯಾಗುತ್ತಿದ್ದಾರೆ.  ಈ ನಿಟ್ಟಿನಲ್ಲಿ ಎಲ್ಲರಿಗೂ ಕಾನೂನು ಅರಿವಿನ ಅಗತ್ಯವಿದೆ ಎಂದು ತಿಳಿಸಿದರು.

    ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎನ್. ಮುನಿರಾಜು ಮಾತನಾಡಿ, ಕಾನೂನು ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು.   ಭಾರತದ ಪ್ರತಿಯೊಬ್ಬ ಪ್ರಜೆಗೂ ಕಾನೂನು ಅರಿವು ಮೂಡಿಸುವುದು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶವೆಂದು ಹೇಳಿದರು.

    ಹಿರಿಯ ಸಿವಿಲ್ ನ್ಯಾಯಾಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ ೧೭೮೦ರಲ್ಲಿ ಸ್ವಾತಂತ್ರ‍್ಯ ಪೂರ್ವ ಬ್ರಿಟಿಷ್ ಆಡಳಿತದಲ್ಲಿ ಲಾರ್ಡ್ ಕಾರ್ನ್ವಾಲಿಸ್ ಅವರ ನೇತೃತ್ವದಲ್ಲಿ ಕ್ರಿಮಿನಲ್ ಕೇಸ್‌ಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಆರೋಪಿಗಳಿಗೆ ಉಚಿತ ಕಾನೂನು ನೆರವು ನೀಡುವ,   ೧೯೪೯ರ ಬಾಂಬೆ ಕಮಿಟಿ, ೧೯೪೯ರ ಪಶ್ಚಿಮ ಬಂಗಾಳದ ಟ್ರೇವರ್ ಹ್ಯಾರಿಸ್ ಸಮಿತಿ, ೧೯೫೮ರ ಬಡವರಿಗೆ ಕೇರಳ ಕಾನೂನು ನೆರವು ನಿಯಮಗಳು, ೧೯೬೦ರ ಕೇಂದ್ರ ಸರ್ಕಾರದ ಯೋಜನೆ,   ೧೯೬೨ರ ಮೂರನೇ ಭಾರತೀಯ ವಕೀಲರ ಸಮಾವೇಶ, ೧೯೮೭ರಲ್ಲಿ ಸವೋಚ್ಛ ನ್ಯಾಯಾಲಯ ಜಾರಿಗೆ ತಂದ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಬಗ್ಗೆ ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್. ಅನಂತ, ವಿವಿಧ ಕಾನೂನು ಕಾಲೇಜುಗಳ ಪ್ರಾಂಶುಪಾಲರು/ಉಪಪ್ರಾಂಶುಪಾಲರು, ಹಿರಿಯ ವಕೀಲರು, ಕಾನೂನು ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ತಿಪಟೂರು ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಕುಪ್ಪುರು ಕಾರ್ಯಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ…

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.