ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತೀ ಸಣ್ಣ(SME)ಘಟಕಗಳ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರು/ಫಲಾನುಭವಿಗಳು ಸಹಾಯಧನ ಸೌಲಭ್ಯಕ್ಕಾಗಿ ಮಾರ್ಗಸೂಚಿಯನ್ವಯ ಪೂರ್ಣ ಪ್ರಮಾಣದ ಪ್ರಸ್ತಾವನೆ ಅರ್ಜಿಯನ್ನು ಕೂಡಲೇ ಸಲ್ಲಿಸತಕ್ಕದ್ದು. ವಿಶೇಷ ಘಟಕ ಯೋಜನೆಯಡಿ ಭೌತಿಕ-೫ ಹಾಗೂ ಗಿರಿಜನ ಉಪ ಯೋಜನೆಯಡಿ ಭೌತಿಕ-೨ ಘಟಕಗಳಿಗೆ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಿದ್ದಗಂಗಾ ಬಡಾವಣೆ, ೫ನೇ ಮುಖ್ಯ ರಸ್ತೆ, ನಾಗನಿಲಯ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಕಚೇರಿ ಅಥವಾ ದೂ.ವಾ.ಸಂ. ೦೮೧೬–೨೨೭೫೩೭೦ಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q