ಸರಗೂರು: ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಹಳ್ಳಕೊಳ್ಳಮುಚ್ಚುತ್ತಾರೆ. ಆದರೆ, ಇದೇ ಕ್ಷೇತ್ರದ ಕಾಡಂಚಿನ ಭಾಗದಲ್ಲಿರುವ ರೈತರು ಜಾನುವಾರುಗಳು ತಿರುಗಾಡುವ ರಸ್ತೆ ಅವ್ಯವಸ್ಥೆಯಾಗಿದೆ ಇದು ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಬಿದರಹಳ್ಳಿ ಗ್ರಾಮದಿಂದ ತಾಲೂಕಿನ ಗಡಿ ಭಾಗದ ಗೆಂಡತ್ತೂರು ಗ್ರಾಮದವರಗೆ ರಸ್ತೆ ದುರಸ್ತಿ ಮಾಡುವಂತೆ ಸೋಮವಾರದಂದು ಕಂಚನಹಳ್ಳಿ ಗ್ರಾಮದ ರಸ್ತೆ ಮಧ್ಯದಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭೀಮನ ಕೊಲ್ಲಿ ಶುಂಠಿ ಬೆಳೆಗಾರರ ಸಭೆಗೆ ತೆರಳುತ್ತಿದ್ದ ವೇಳೆ ರಸ್ತೆ ಹಳ್ಳಗುಂಡಿಗಳನ್ನ ನೋಡಿ ದಿಢೀರನೆ ಹಳ್ಳ ಕೊಳ್ಳಗಳ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಯಿತು.
ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬರುವ ರಸ್ತೆ ಅಧಿಕಾರಿಗಳ ಕಣ್ಣಿಗೆ ಕಾಣುತ್ತದೆ ಬಿದರಹಳ್ಳಿ ಗ್ರಾಮ ಮಾರ್ಗವಾಗಿ ಮೂರ್ಬಾಂದು, ಕೆಂಚನಹಳ್ಳಿ, ಎನ್.ಬೇಗೂರು, ಹೊಸಹಳ್ಳಿ, ಗೆಂಡತ್ತೂರು, ಹಳ್ಳಿಯ ರೈತರು ದಿನನಿತ್ಯ ತಿರುಗಾಡುತ್ತಿದ್ದಾರೆ. ಆದರೆ ತಾಲೂಕಿನ ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಹಾಗೂ ರಸ್ತೆ ಸರ್ಕಾರಕ್ಕೆ ಕಾಡುತ್ತಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಣಿಗಳು ಕೂಡ ತಿರುಗಾಡಲು ಯೋಗ್ಯವಲ್ಲದ ರಸ್ತೆ ಇದಾಗಿದೆ ಮುಖ್ಯಮಂತ್ರಿಗಳ ಓಲೈಕೆಗಾಗಿ ಮೈಸೂರು ಎಚ್.ಡಿ.ಕೋಟೆ ರಸ್ತೆ ಕೊಳ್ಳಮುಚ್ಚುವ ಕಾರ್ಯ ನಡೆದಿದೆ. ಬಿದರಹಳ್ಳಿ ರಸ್ತೆಯ ಬಗ್ಗೆ ಕ್ಷೇತ್ರದ ಶಾಸಕರಿಗೆ, ಸರ್ಕಾರಕ್ಕೆ ಮತ್ತು ಅಧಿಕಾರಿಗಳ ಕಣ್ಣಿಗೆ ಕಾಣುತ್ತಿಲ್ಲವೇ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಭಾಗದಲ್ಲಿ ದಿನನಿತ್ಯ ಈ ಭಾಗದ ರೈತರು ಸರಕು ಸಾಗಾಣಿಕೆ ಶುಂಠಿ ಮಾರಾಟ ಮಾಡಲು ಮೈಸೂರು, ಬೆಂಗಳೂರು, ಹ್ಯಾಂಡ್ ಪೋಸ್ಟ್ ಮಾರ್ಗವಾಗಿ ಕೇರಳಕ್ಕೆ ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ರಸ್ತೆಯ ಬಗ್ಗೆ ಹಲವು ಬಾರಿ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದರೂ, ಇದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೇ ಕೂಡಲೇ ರಸ್ತೆಯನ್ನು ಸರಿಪಡಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಗುಂಡ್ಲುಪೇಟೆ ನಾಗಾರ್ಜುನ, ಪಿ ಸೋಮಶೇಖರ್, ಸುರೇಶ್ ಶೆಟ್ಟಿ, ಮರಿಸ್ವಾಮಿ ನಾಯಕ, ಸುನಿಲ್ ಕುಮಾರ್, ಕೆಂಡಗಣ್ಣಸ್ವಾಮಿ, ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಮಲ್ಲೇಶ್, ರಂಗರಾಜು, ಬನ್ನೂರು ಸೂರಿ, ಶಿವಸ್ವಾಮಿ ಇನ್ನು ಮುಂತಾದವರು ಇದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q