ಶಿರಾ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಉಳಿಯುವುದೇ ಕಷ್ಟ ಅವುಗಳಿಗೆ ಮಕ್ಕಳು ಸೇರುವುದೇ ಕಷ್ಟ ಎಂಬುವಂತಹ ಕಾಲದಲ್ಲಿ ಇಲ್ಲೊಂದು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಅರ್ಧ ಶತಮಾನ ಕಳೆದರೂ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದೆ.
ಅದು ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆದರೆ ಇಲ್ಲಿನ ಮಕ್ಕಳಿಗೆ ಕುಳಿತುಕೊಳ್ಳಲು ಸರಿಯಾದ ಕೊಠಡಿಯ ವ್ಯವಸ್ಥೆಗಳೆಲ್ಲ ಇರುವ ಕೊಠಡಿಗಳು ಶೀತಲ ಅವಸ್ಥೆಯಲ್ಲಿದ್ದು ಮಳೆ ಬಂದರೆ ಸೋರುವ ಹಾಗೂ ಬಿದ್ದು ಹೋಗುವ ಸ್ಥಿತಿಯಲ್ಲಿವೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ, ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸುಮಾರು 90 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ತರಗತಿಗಳು ನಡೆಯಲು ಇಲ್ಲಿ ಕೊಠಡಿ ವ್ಯವಸ್ಥೆಗಳಿಲ್ಲ. ಕೇವಲ ನಾಲ್ಕು ಕೊಠಡಿಗಳಿಗೆ ಮಾತ್ರ ಇವೆ ನಾಲ್ಕರಲ್ಲಿ ಒಂದು ಶಿಥಿಲಗೊಂಡಿದ್ದು, ಒಂದು ಕೊಠಡಿಯಲ್ಲಿ ಆಫೀಸ್ ರೂಂ ಹಾಗೂ ಆಹಾರ ದಾಸ್ತಾನವನ್ನು ಇಡಲು ಬಳಸಿಕೊಳ್ಳುತ್ತಿದ್ದು, ಕೇವಲ ಎರಡು ತರಗತಿ ಕೊಠಡಿಗಳು ಮಾತ್ರ ಇವೆ.
ಒಂದರಿಂದ ಮೂರನೇ ತರಗತಿ ವರೆಗಿನ ಮಕ್ಕಳನ್ನು ಒಂದು ಕೊಠಡಿಯಲ್ಲಿ ಹಾಗೂ ನಾಲ್ಕರಿಂದ ಏಳನೇ ತರಗತಿಯ ವರೆಗಿನ ಮಕ್ಕಳನ್ನು ಒಂದು ಕಡೆ ಕೂರಿಸಿ ಪಾಠ ಹೇಳಲಾಗುತ್ತಿದೆ ಅದರಲ್ಲಿಯೂ ಸಹ ಇರುವ ಕೊಠಡಿಗಳು ಬಿದ್ದು ಹೋಗುವ ಸ್ಥಿತಿಯಲ್ಲಿದ್ದು ಆದಷ್ಟು ಬೇಗ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಶಾಲೆಯ ಅಭಿವೃದ್ಧಿಪಡಿಸಬೇಕಾಗಿ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q