ತುಮಕೂರು: ನಗರದ ಚಿಕ್ಕಪೇಟೆಯ ಗಾರ್ಡನ್ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಂಡಲ ಪೂಜೆ ಹಾಗೂ ಮಕರ ಜ್ಯೋತಿ ಪೂಜಾ ಕಾರ್ಯಕ್ರಮ ನ.15 ರಿಂದ ಜನವರಿ 14ರವರೆಗೆ ನಡೆಯಲಿದೆ.
ನ. 15 ರಂದು ಸಂಜೆ 6:30ಕ್ಕೆ ಮಂಡಲ ಪೂಜೆ ಉದ್ಘಾಟನೆಗೆ ಹಿರೇಮಠಾಧ್ಯಕ್ಷರಾದ ಡಾ.ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ ಆಗಮಿಸಲಿದ್ದಾರೆ. ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಟಿ.ಬಿ.ಶೇಖರ್ ಮನವಿ ಮಾಡಿದ್ದಾರೆ.
ವ್ರತ ಪ್ರಾರಂಭಿಸುವ, ಯಾತ್ರೆ ಮಾಡುವ ಭಕ್ತಾದಿಗಳಿಗೆ ನ.15 ರಿಂದ ದೇವಾಲಯದಲ್ಲಿ ಮಾಲೆ ಹಾಕುವ, ಇರುಮುಡಿ ಕಟ್ಟುವ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296