nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು ಹೆಸರಿಗೆ ಮಾತ್ರ ಪ್ರತ್ಯೇಕ ತಾಲೂಕು, ಈವರೆಗೂ ಮೂಲಭೂತ ಸೌಕರ್ಯ ಸಿಕ್ಕಿಲ್ಲ: ಬಡಗಲಪುರ ನಾಗೇಂದ್ರ ಆಕ್ರೋಶ
    ಜಿಲ್ಲಾ ಸುದ್ದಿ November 15, 2024

    ಸರಗೂರು ಹೆಸರಿಗೆ ಮಾತ್ರ ಪ್ರತ್ಯೇಕ ತಾಲೂಕು, ಈವರೆಗೂ ಮೂಲಭೂತ ಸೌಕರ್ಯ ಸಿಕ್ಕಿಲ್ಲ: ಬಡಗಲಪುರ ನಾಗೇಂದ್ರ ಆಕ್ರೋಶ

    By adminNovember 15, 2024No Comments2 Mins Read

    ಸರಗೂರು: ಪ್ರತ್ಯೇಕ ತಾಲ್ಲೂಕೆಂದು ಘೋಷಣೆಯಾಗಿ 7 ರಿಂದ 8 ವರ್ಷಗಳ ಕಳೆದು ಹೋಗಿದೆ. ಹೆಸರುವಾಸಿಯಾದ ಊರಾಗಿದ್ದರೂ ತಾಲೂಕು ಕೇಂದ್ರವಾಗಿ ಬಿಂಬಿಸುವಂತಹ ಮೂಲಭೂತ ಸೌಕರ್ಯಗಳನ್ನು ಇದುವರೆಗೂ ಯಾವುದೇ ಸರ್ಕಾರ ಬಂದರೂ ಕಲ್ಪಿಸದೇ,  ಹೆಸರಿಗೆ ಮಾತ್ರ ತಾಲೂಕು ಎಂದು ಕರೆಯಲಾಗುತ್ತಿದೆ  ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ಒತ್ತಾಯಿಸಿದರು.

    ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಂದು ರೈತ ಸಂಘ ಕಾರ್ಯಕರ್ತರ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರಗೂರು ತಾಲೂಕಿನ ಸರ್ವತೋಮುಖ ಬೆಳವಣಿಗಾಗಿ ಹೋರಾಟ ರೂಪಿಸಲು ಪೂರ್ವಭಾವಿ ಸಭೆಯನ್ನು  ಬಡಗಲಪುರ ನಾಗೇಂದ್ರ ಅವರು ಅಧ್ಯಕ್ಷತೆಯಲ್ಲಿ ಸಭೆ ಕರೆದು ಮಾತನಾಡಿದರು.

    ತಾಲೂಕು ಎಂದು ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇತೃತ್ವದಲ್ಲಿ ಮಾಡಿದ್ದಾರೆ. ಆದರೆ ಇನ್ನೂ ಅಭಿವೃದ್ಧಿ ಕಂಡಿಲ್ಲ, ಈ ತಾಲೂಕಿನಲ್ಲಿ 2 ಎರಡು ಹೋಬಳಿಗಳಲ್ಲೂ ಅರಣ್ಯ ಪ್ರದೇಶವಿದೆ. ಇದ್ದರೂ ಅಭಿವೃದ್ಧಿ ಕಂಡಿಲ್ಲ‌.

    ತಾಲೂಕಿನ ಎರಡು ಹೋಬಳಿಯಲ್ಲಿ ಬಂಡಿಪುರ ಅಭಯಾರಣ್ಯ ವ್ಯಾಪ್ತಿಯ ಬರುವ ಗ್ರಾಮಗಳು ಹೆಚ್ಚು ಕಾಡಂಚಿನ ಭಾಗದ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಇವರ ಜೀವನ ಅತ್ಯಂತ ಶೋಚನೀಯವಾಗಿದೆ.ಹಲವಾರು ಹಳ್ಳಿಗಳಿಗೆ ಇನ್ನೂ ರಸ್ತೆಗಳೇ  ಇಲ್ಲ. ಕುಡಿಯುವ ನೀರಿನ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳೆ ದೊರೆತಿಲ್ಲ ಎಂದರು.

    ಶಿಕ್ಷಣ ಕ್ಷೇತ್ರ ಮುಂದಕ್ಕೆ ಸಾಗುತ್ತಿಲ್ಲ. ತಾಲ್ಲೂಕಿನಲ್ಲಿರುವ ಹಲವಾರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶುವೈದ್ಯ ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲ. ತಾಲ್ಲೂಕಿನ ಆಡಳಿತ ಸುಸಜ್ಜಿತವಾದ ಕಟ್ಟಡಗಳಿಲ್ಲ ಸಾರ್ವಜನಿಕ ಆಡಳಿತವನ್ನು ಸಮರ್ಪಕವಾಗಿ ನಡೆಸಲು ಖಾಲಿ ಇರುವ ಹುದ್ದೆಗಳನ್ನು ತುಂಬಿಯೇ ಇಲ್ಲ. ಕ್ಷೇತ್ರದ ಶಾಸಕರು ತಾಲೂಕಿನ ಬಗ್ಗೆ ಗಮನಹರಿಸಿ ಅಭಿವೃದ್ಧಿಗೊಳಿಸಲು ಮುಂದಾಗಬೇಕು. ರಾಜ್ಯದಲ್ಲಿ ವನಸಿರಿ ನಾಡು ಎಂದು ಬಿರುದು ಪಡೆದಿರುವ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ನಾಲ್ಕು ಜಲಾಶಯಗಳು ಇದ್ದರೂ, ತಾಲ್ಲೂಕಿನ ಜನತೆಗೆ ಯಾವುದೇ ಅನುಕೂಲ ಇಲ್ಲ ಆಕ್ರೋಶ ವ್ಯಕ್ತಪಡಿಸಿದರು.

    ಮುಂದಿನ ತಿಂಗಳು ಡಿ.8ರಂದು ತಾಲೂಕಿನ ಎಲ್ಲಾ ಪ್ರಗತಿಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಗೆ ಆಹ್ವಾನಿಸಲಾಗುವುದು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಪೂರ್ವಭಾವಿ ಸಭೆಗೆ ಬಂದು ತಮ್ಮ ಸಲಹೆ ಸಹಕಾರವನ್ನು ನೀಡಿ ತಾಲೂಕಿನ ಕ್ಷೇಮಾಭಿವೃದ್ಧಿಗಾಗಿ ಹೋರಾಟ ಹೆಜ್ಜೆ ಹಾಕಬೇಕೆಂದು ಮನವಿ ಮಾಡಿಕೊಂಡರು.

    ಸರಗೂರು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ ಮಾತನಾಡಿ, ತಾಲೂಕಿಗೆ ಹೆಚ್ಚು ಇಲಾಖೆಗಳು ಬರಬೇಕು. ಡಬಲ್ ರಸ್ತೆ ಮಾಡಬೇಕು. ಇತ್ತೀಚೆಗೆ ಸರಗೂರು ತಾಲೂಕು ದೊಡ್ಡದಾಗಿ ಬೆಳೆಯುತ್ತದೆ. ಆದ್ದರಿಂದ ಶಾಸಕರು ಹಾಗೂ ಲೋಕಸಭಾ ಸಂಸದರು ಸರಗೂರು ತಾಲೂಕಿನ ಹೆಚ್ಚಿನ ರೀತಿಯಲ್ಲಿ ಗಮನಹರಿಸಬೇಕು. ಏಕೆಂದರೆ ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಳವಾಗಿದೆ. ಎಲ್ಲಾ ಇಲಾಖೆಗಳು ಬಂದರೆ ತಾನಾಗಿ ಅಭಿವೃದ್ಧಿ ಕಡೆಗೆ ಹೋಗುತ್ತದೆ. ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳು ಕಾಡಂಚಿನ ಭಾಗದಿಂದ ಬರುವ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಕೂಗು ಕೇಳಿ ಬರುತ್ತಿದೆ. ಅದರ ಜೊತೆಯಲ್ಲಿ ರೈತರಿಗೆ ಸಾಗುವಾಳಿ ವಿತರಣೆ ಮಾಡುತ್ತಿಲ್ಲ. ಅಕ್ರಮ ಸಕ್ರಮ ಸಮಿತಿ ವತಿಯಿಂದ ಪಾಸ್ ಆಗಿ ಬಂದರು, ಕಂದಾಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಮಾಡುತ್ತಾರೆ. ಅದರ ಜೊತೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನೀಡುತ್ತಿದ್ದಾರೆ ಎಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷರು ಚನ್ನನಾಯಕ, ಮಹದೇವನಾಯಕ, ಕಾರ್ಯಧ್ಯಕ್ಷ ಬಿರ್ವಾಳ್ ಮಹಲಿಂಗ, ಕಾರ್ಯದರ್ಶಿಗಳು ನವೀನ್ ಕುಮಾರ್, ನಂದಿಶ್ವರಸ್ವಾಮಿ, ಕುಮಾರ್ ಗೌಡ, ಉಪಾಧ್ಯಕ್ಷ ಗೊವಿಂದರಾಜು, ಯುವ ಘಟಕದ ಅಧ್ಯಕ್ಷ ಶಿವಪ್ಪ, ಎಲ್ಲಾ ಸಂಘ ಸಂಘಟನೆ ಮುಖಂಡರು ವೈಕುಂಠನಾಯಕ, ಸಣ್ಣ ಸ್ವಾಮಿ, ಸರಗೂರು ಕೃಷ್ಣ, ವೆಂಕಟೇಶ್, ಬ್ರಹ್ಮದೇವ, ರಂಗಸ್ವಾಮಿ, ರಮೇಶ್, ನಾರಾಯಣ್, ಸುರೇಶ್, ರೈತ ಮಹಿಳಾ ಸಂಘ ಉಪಾಧ್ಯಕ್ಷರು ರತ್ನಮ್ಮ, ಮಹದೇವಮ್ಮ, ಮಹದೇವನಾಯಕ, ಜವರನಾಯಕ, ಚೆಲುವರಾಜು, ಅಣ್ಣಯ್ಯಸ್ವಾಮಿ, ಮಹೇಶ್ ಕುಮಾರ್, ಗೋವಿಂದರಾಜು, ಇನ್ನೂ ಎಲ್ಲಾ ಪ್ರಗತಿಪರ ಹಾಗೂ ಸಂಘ ಸಂಸ್ಥೆಗಳು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.