ಕೋಲಾರ: ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ.ಗೌಡ ಅವರು ಇಂದು ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಕೋಲಾರ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಕೊಡುಗೆಯಾಗಿ ನೀಡಿದರು.
ಈ ವೇಳೆ ವಿಧಾನ ಪರಿಷತ್ ಶಾಸಕರಾದ ವೈ.ಎ.ನಾರಾಯಣ ಸ್ವಾಮಿ ಹಾಗೂ ಚಿದಾನಂದ್ ಎಂ.ಗೌಡ ಅವರು ಆಂಬುಲೆನ್ಸ್ ಗೆ ಚಾಲನೆ ಕೊಟ್ಟರು.
ಬಳಿಕ ಕಾರ್ಯಕ್ರಮ ಕುರಿತು ಮಾತನಾಡಿದ ಚಿದಾನಂದ ಗೌಡ, ಕೊವಿಡ್ ಹೆಚ್ಚುತ್ತಿರುವ ಕಾರಣ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅನುಕೂಲವಾಗಲೆಂದು ಸುಸಜ್ಜಿತ ಆಕ್ಸಿಜನ್ ಮತ್ತು ವೆಂಟಿಲೇಟರ್ ಸೌಲಭ್ಯವುಳ್ಳ ಆಂಬುಲೆನ್ಸ್ ನೀಡಿದ್ದು, ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯ ಮುಂತಾದ ಜಿಲ್ಲೆಗಳಿಗೂ ನೀಡಿ, ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಜಗದೀಶ್, ವೈದ್ಯಾಧಿಕಾರಿಗಳಾದ ಮಂಜುನಾಥ್ ರೆಡ್ಡಿ, ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರಾದ ವೇಣುಗೋಪಾಲ್, ತಿಮ್ಮರಾಯಪ್ಪ, ಮಾಗೇರಿ ನಾರಾಯಣಸ್ವಾಮಿ, ವಿಜಯ್ ಕುಮಾರ್, ಬಾಲಾಜಿ, ಸಹ್ಯಾದ್ರಿಯ ಕಾಲೇಜ್ ಉದಯ್ ರವರು, ಮುನಿವೆಂಕಟಪ್ಪ, ಕಾನಿಷ್ಕ ಶಶಿ ಕುಮಾರ್ ರವರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ವರದಿ : ರಾಜೇಶ್ ರಂಗನಾಥ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy