nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ರಂಗಗಳಿಗೂ ಮುನ್ನುಡಿ ಬರೆದ ಸಹಕಾರಿ ರಂಗ: ಸಿದ್ದರಾಮಯ್ಯ
    ರಾಜ್ಯ ಸುದ್ದಿ November 18, 2024

    ಎಲ್ಲ ರಂಗಗಳಿಗೂ ಮುನ್ನುಡಿ ಬರೆದ ಸಹಕಾರಿ ರಂಗ: ಸಿದ್ದರಾಮಯ್ಯ

    By adminNovember 18, 2024No Comments3 Mins Read
    siddaramaiah

    ಬಾಗಲಕೋಟೆ: ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ದಿ ಹೊಂದುವಲ್ಲಿ ಪರಸ್ಪರ ಸಹಕಾರ ಅವಶ್ಯವಾಗಿದ್ದು, ಎಲ್ಲ ರಂಗಗಳಿಗೂ ಈ ಸಹಕಾರಿ ರಂಗ ಮುನ್ನುಡಿ ಬರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ನಗರದ ಹುಬ್ಬಳ್ಳಿ ಬೈಪಾಸ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಹಮ್ಮಿಕೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಸಹಕಾರ ರಂಗ ಬಲಿಷ್ಟವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯವೆಂದು ತಿಳಿಸಿದರು.


    Provided by
    Provided by

    ಸ್ವಾತಂತ್ರ್ಯ ಪೂರ್ವದಲ್ಲಿಯೇ ದೇಶದಲ್ಲಿಯೇ ಸಹಕಾರ ಕ್ಷೇತ್ರಕ್ಕೆ ಮುನ್ನುಡಿ ಬರೆದಿದ್ದು, ನಮ್ಮ ರಾಜ್ಯದ ಗದಗ ಜಿಲ್ಲೆಯ ಕನಗಿನಹಾಳ ಶಿವನಗೌಡ ಪಾಟೀಲ 1904ರಲ್ಲಿ ಸ್ಥಾಪಿಸಿದ ಸಹಕಾರಿ ಸಂಘ. ಸ್ವಾತಂತ್ರ್ಯದ ನಂತರ ನೆಹರು ಹಾಗೂ ಗಾಂಧಿಜೀಯವರು ಈ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ ತಮ್ಮ ಪಂಚವಾರ್ಷಿಕ ಯೋಜನೆಗಳಲ್ಲಿ ಈ ಸಹಕಾರಿ ಕ್ಷೇತ್ರವು ಒಳಗೊಂಡಿತ್ತು. ಹಳ್ಳಿಯಿಂದ ದಿಲ್ಲಿಯವರೆಗೆ ಗ್ರಾಮ ಸ್ವರಾಜ್ಯ ಆಗಬೇಕೆಂಬ ಗಾಂದೀಜಿಯವರ ಕಲ್ಪನೆಯಂತೆ ಗ್ರಾಮೀಣ ಪ್ರದೇಶದಲ್ಲಿ ಮೊದಲು ಆರ್ಥಿಕವಾಗಿ ಪ್ರಬಲರಾದಾಗ ಮಾತ್ರ ದೇಶ ಸುಭದ್ರವಾಗುತ್ತದೆ ಎಂಬ ಮುಖ್ಯದ್ಯೇಯ ನಾನು ಎಲ್ಲರಿಗಾಗಿ, ಎಲ್ಲರೂ ನನಗಾಗಿ ಎಂಬ ವಾಕ್ಯವನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದರು.

    ಸಹಕಾರಿ ಕ್ಷೇತ್ರದಲ್ಲಿ ನಂಬಿಕೆ ಬಹಳ ಮುಖ್ಯವಾಗಿದ್ದು, ಗ್ರಾಮೀಣ ಬದುಕಿನ ಆರ್ಥಿಕ ಬೆಳೆವಣಿಗೆ ಆಗಬೇಕಾದರೆ ಮಹಿಳೆಯರು, ಯುವಕರು ಮುಕ್ತವಾಗಿ ಸಹಕಾರಿ ಕ್ಷೇತ್ರದಲ್ಲಿ ಪಾಲ್ಗೊಳ್ಳುವ ಕೆಲಸವಾಗಬೇಕು. ಅಲ್ಲದೇ ವಿಶೇಷವಾಗಿ ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಹೆಚ್ಚು ಹೆಚ್ಚು ತೊಡಗಿಸುವ ಕಾರ್ಯವಾದಾಗಾ ಮಾತ್ರ ವಿಕಾಸ ಹೊಂದಲು ಸಾಧ್ಯ. 2013ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ವರ್ಗದವರಿಗೂ ಉಚಿತವಾಗಿ ಸದಸ್ಯತ್ವಕ್ಕೆ ಅಣಿ ಮಾಡಿಕೊಟ್ಟಿದ್ದೆ. ಪಶು ಸಂಗೋಪನೆ ಸಚಿವನಾಗಿದ್ದಾಗ ಹಾಲು ಉತ್ಪಾದಕ ಸಹಕಾರಿ ಸಂಘಗಳು ಹಾಗೂ ಡೈರಿಗಳು ಬೇರೆ ಬೇರೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರೆಡರನ್ನು ಒಂದುಗೂಡಿಸಿ ಹಾಲು ಉತ್ಪಾದಕರ ಮಹಾಮಂಡಳ ಎಂದು ಮಾಡಲಾಯಿತು ಎಂದರು.

    ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಮಾತನಾಡಿ ವಿಜಯಪುರ ಬಾಗಲಕೋಟೆ ಜಿಲ್ಲೆಗಳು ಒಂದಾಗಿದ್ದರೆ ಇಂದು ಸಹಕಾರ ಕ್ಷೇತ್ರದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ಗುರುತಿಸಿಕೊಳ್ಳುತ್ತಿದ್ದೇವು. ವಿಜಯಪುರ ಜಿಲ್ಲಾ ಸಹಕಾರಿ ಬ್ಯಾಂಕ್ ಪ್ರಥಮದಲ್ಲಿ ಪಾಂಡುರಂಗ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಕೇವಲ 63 ಸಾವಿರ ಬಂಡವಾಳದಲ್ಲಿ ಕಾರ್ಯನಿರ್ವಹಿಸಿ ಇಂದು 13 ಸಾವಿರ ಕೋಟಿ ರೂ.ಗಳ ವ್ಯವಹಾರ ನಡೆಸುತ್ತಿದೆ ಎಂದರು.

    ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ ಯಾವುದೇ ಒಂದು ಸಹಕಾರಿ ಸಂಸ್ಥೆ ಕಷ್ಟದಲ್ಲಿದ್ದಾಗ ಅದನ್ನು ರಕ್ಷಿಸಿ, ಪೋಷಿಸುವ ಕಾರ್ಯ ಸರಕಾರದ್ದಾಗಿದ್ದು, ಇಂದು ನಮ್ಮ ಜಿಲ್ಲೆಗೆ ಮುಖ್ಯಮಂತ್ರಿಗಳು ಆ ಕಾರ್ಯ ನಡೆಸಿಕೊಟ್ಟಿದ್ದಾರೆ. ಜಿಲ್ಲೆಯ ಒಂದೇ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿರುವ ರನ್ನ ಸಕ್ಕರೆ ಕಾರ್ಖಾನೆ ಇತ್ತೀಚೆಗೆ ಸ್ಥಗಿತವಾಗುವ ಸಂಭವವಿತ್ತು. ಆ ಸಮಯದಲ್ಲಿ 40 ಕೋಟಿ ರೂ. ನೀಡುವದಲ್ಲದೇ ಕಾರ್ಖಾನೆ ಪುನರ್ ಕಾರ್ಯನಿರ್ವಹಿಸುವಲ್ಲಿ ಎಸ್.ಆರ್.ಪಾಟೀಲರ ನೆರವು ಪಡೆದು ಈ ಭಾರಿ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಿದೆ ಎಂದರು.

    ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ ಬಾಗಲಕೋಟೆ-ವಿಜಯಪುರ ಅಖಂಡ ಜಿಲ್ಲೆಯಾಗಿದ್ದಾಗ ಮುಂಚುಣಿಯಲ್ಲಿದ್ದ ಕೇಂದ್ರ ಸಹಕಾರಿ ಬ್ಯಾಂಕ್ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಅಂದು ನಿರ್ದೇಶಕರಾಗಿದ್ದ ಎಸ್.ಆರ್.ಪಾಟೀಲ, ಜೆ.ಟಿ.ಪಾಟೀಲ ಹಾಗೂ ಚಿಮ್ಮನಕಟ್ಟಿಯವರು ಬಾಗಲಕೋಟೆಗೆ ಪ್ರತ್ಯೇಕ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಾರಂಭಿಸಿದರು. ಸದ್ಯ ಎರಡು ಜಿಲ್ಲೆಗಳ ಕೇಂದ್ರ ಸಹಕಾರಿ ಬ್ಯಾಂಕ್ ಮುಂಚೂಣಿಯಲ್ಲಿವೆ ಎಂದರು.

    ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಪ್ರಾರಂಭದಲ್ಲಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ 72 ಜನರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪ್ರಾರಂಭದಲ್ಲಿ ಸಹಕಾರ ಧ್ವಜಾರೋಹ ನೆರವೇರಿಸಿ ಬಲೂನುಗಳ ಗುಚ್ಚವನ್ನು ಆಕಾಶದಲ್ಲಿ ಹಾರಿಬಿಡಲಾಯಿತು.

    ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಹಾಗೂ ನವದೆಹಲಿ ರಾಜ್ಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕ ಹಾಗೂ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಶಾಸಕ ಬಿ.ಬಿ.ಚಿಮ್ಮನಕಟ್ಟಿ, ರಾಜ್ಯ ಅಪೇಕ್ಸ್ ಬ್ಯಾಂಕ್‍ನ ಅಧ್ಯಕ್ಷ ಬೆಳ್ಳಿ ಪ್ರಕಾಶ ಸೇರಿದಂತೆ ಇತರರು ಇದ್ದರು. ಬಿಡಿಸಿಸಿ ಬ್ಯಾಂಕ್‍ ನ ಅಧ್ಯಕ್ಷ ಅಜಯಕುಮಾರ ಸರನಾಯ ಸ್ವಾಗತಿಸಿದರು.

    ಮುಂಬರುವ ದಿನಗಳಲ್ಲಿ ಸಹಕಾರಿ ಇಲಾಖೆಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವಾಗ ಸಹಕಾರಿ ವಿಷಯದಲ್ಲಿ ಪದವಿ ಹಾಗೂ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

    — ಸಿದ್ದರಾಮಯ್ಯ, ಮುಖ್ಯಮಂತ್ರಿ 


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.