nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್—19 ಕಾಲದ ಹಗರಣ: ಕರ್ನಾಟಕ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಮೂರ್ತಿಗಳ ಕಣ್ಗಾವಲಿನಲ್ಲಿ ತನಿಖೆಗೆ ನೈಜ ಹೋರಾಟಗಾರರ ವೇದಿಕೆ ಆಗ್ರಹ
    ರಾಜ್ಯ ಸುದ್ದಿ November 18, 2024

    ಕೋವಿಡ್—19 ಕಾಲದ ಹಗರಣ: ಕರ್ನಾಟಕ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಮೂರ್ತಿಗಳ ಕಣ್ಗಾವಲಿನಲ್ಲಿ ತನಿಖೆಗೆ ನೈಜ ಹೋರಾಟಗಾರರ ವೇದಿಕೆ ಆಗ್ರಹ

    By adminNovember 18, 2024No Comments3 Mins Read
    covid 19

    ಬೆಂಗಳೂರು: ಸಾಂಕ್ರಾಮಿಕ ರೋಗ ಕೋವಿಡ್– 19 ಮಾರಕ ಕಾಯಿಲೆಯಿಂದ  ಮುಖ್ಯವಾಗಿ ನಮ್ಮ ರಾಜ್ಯದಲ್ಲಿ ಸಾವಿರಾರು ಸಾವುಗಳು ಸಂಭವಿಸಿದ್ದು, ಈ ರೋಗದಿಂದ ರಾಜ್ಯದ ನಾಗರಿಕರು ತತ್ತರಿಸಿ ಜೀವನ್ಮರಣದ ಹೋರಾಟ ನಡೆಸುವ ಸಂದರ್ಭದಲ್ಲಿ  ನಾಗರಿಕರನ್ನು ರಕ್ಷಿಸಲು ಹೊಣೆ ಹೊತ್ತಿರುವ ಗುರುತರ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮುಖ್ಯಮಂತ್ರಿ, ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರ ಮಾಡಿರುವುದು  ನ್ಯಾಯಮೂರ್ತಿ ಮೈಕೆಲ್ ಡಿ ಕುನ್ನರವರ ನೇತೃತ್ವದ ಆಯೋಗ ವರದಿಯಲ್ಲಿ ಉಲ್ಲೇಖವಾಗಿದ್ದು ನಾಗರೀಕರ ಜೀವದ ಜೊತೆ ಚೆಲ್ಲಾಟವಾಡಿರುವ ಮತ್ತು ಈ ಸಾಂಕ್ರಾಮಿಕ ರೋಗದಿಂದಲೇ ಹಣ ಗಳಿಸುವ ಉದ್ದೇಶದಿಂದ ಹಲವಾರು ಕಂಪನಿಗಳ ಜೊತೆ ಕೈಜೋಡಿಸಿ  ವೈದ್ಯಕೀಯ ಸಾಮಗ್ರಿ, ಉಪಕರಣಗಳನ್ನು ಕೊಂಡುಕೊಳ್ಳಲು ಮಾಡಿರುವ ವ್ಯವಹಾರದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ನ್ಯಾಯಮೂರ್ತಿ ಮೈಕಲ್ ಡಿ ಕುನ್ನ ಅವರು ತಮ್ಮ  ತನಿಖಾ ವರದಿಯಲ್ಲಿ ಬೆಳಕನ್ನು ಚೆಲ್ಲಿದ್ದಾರೆ. ಈ ವರದಿಯ ಬಗ್ಗೆ ಮಾಧ್ಯಮಗಳು ವ್ಯಾಪಕವಾಗಿ ಪ್ರಸಾರ ಮಾಡುತ್ತಿರುವ ಹಿನ್ನೆಲೆಯಲ್ಲಿ  ನೈಜ ಹೋರಾಟಗಾರರ ವೇದಿಕೆ ಸರ್ಕಾರಕ್ಕೆ ಇಮೇಲ್ ಮೂಲಕ ವಿಶೇಷ ಮನವಿ  ಸಲ್ಲಿಸಿದೆ.

    ಬಹಳ ಮುಖ್ಯವಾಗಿ ಕೋವಿಡ್ 19 ಸಂಕ್ರಾಮಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿಯೇ ಸರ್ಕಾರದ ಉನ್ನತ ಅಧಿಕಾರಿಗಳು ವೈದ್ಯಕೀಯ ಉಪಕರಣಗಳು ಮತ್ತು ಸಾಮಗ್ರಿಗಳ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದಿ ಫೈಲ್ ವರದಿ ಮಾಡಿದ್ದು, ಆ ಸಂದರ್ಭದಲ್ಲಿ ಯಾರೂ ಕೂಡ  ಈ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ.


    Provided by
    Provided by

    ದೇಶ ಸ್ವಾತಂತ್ರ ಗಳಿಸಿದ ನಂತರ ಇಲ್ಲಿಯವರೆಗೆ ನಮ್ಮನ್ನು ಆಳಿದ ವಿವಿಧ ರಾಜಕೀಯ ಪಕ್ಷಗಳ ಸರ್ಕಾರಗಳು ನಡೆಸುವ ಭ್ರಷ್ಟಾಚಾರಗಳನ್ನು ಈವರೆಗೂ ನಾಗರೀಕರು ಒಂದಲ್ಲ ಒಂದು ರೀತಿ ಸಹಿಸಿಕೊಂಡು ಬಂದಿದ್ದಾರೆ.  ಆದರೆ ಸಾಂಕ್ರಾಮಿಕ ರೋಗ ಕೋವಿಡ್ 19 ರಾಜ್ಯದ ನಾಗರಿಕರು ತಮ್ಮ ತಮ್ಮ ಕುಟುಂಬದ ಸದಸ್ಯರನ್ನು ಆಪ್ತರನ್ನು ಕಳೆದುಕೊಂಡ ನೋವಿನಲ್ಲಿ ತಾವು ಕೂಡ ಜೀವನ್ಮರಣದ ನಡುವೆ  ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ನಡೆದ ಅವ್ಯವಹಾರ, ಭ್ರಷ್ಟಾಚಾರವನ್ನು ಸಹಿಸಲು ಸಾಧ್ಯವೇ ಇಲ್ಲ.  ಇಂತಹ ರಾಕ್ಷಸಿ ಮನಸ್ಥಿತಿಯುಳ್ಳ, ಭ್ರಷ್ಟಾಚಾರವೆಸಗಿದ ಜನಪ್ರತಿನಿಧಿಗಳು, ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಇನ್ನಿತರ ಸರ್ಕಾರದ ಅಧಿಕಾರಿಗಳು ಯಾರೇ ಆಗಲಿ ಅವರು ಶಿಕ್ಷೆಗೆ ಅರ್ಹರಾಗಿದ್ದು, ಈ ಪ್ರಕರಣದ ಆರೋಪಿ ಸ್ಥಾನದಲ್ಲಿರುವವರನ್ನು ಗುರುತಿಸಿ ಕಂಬಿ ಹಿಂದೆ ಕಳಿಸುವ ಗುರುತರ ಜವಾಬ್ದಾರಿ ಈಗ ಸರ್ಕಾರದ ಮೇಲಿದೆ. ಈ ಅಕ್ರಮದಲ್ಲಿ ಭಾಗಿ ಆಗಿರುವ ಐಎಎಸ್, ಕೆ ಎ ಎಸ್ ಸೇರಿ ಎಲ್ಲಾ ವೃಂದ ದ ಅಧಿಕಾರಿ, ನೌಕರರನ್ನು ತಕ್ಷಣ ವೇ ಅಮಾನತು ಗೊಳಿಸಬೇಕು ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

    ಸಾಂಕ್ರಾಮಿಕ ರೋಗದಿಂದ ಕುಟುಂಬ ಕುಟುಂಬಗಳು ತತ್ತರಿಸಿ ಹೋಗುತ್ತಿರುವ ಸಂದರ್ಭದಲ್ಲಿ ಈ ಸಾಂಕ್ರಾಮಿಕ ರೋಗವನ್ನೇ ಹಣಗಳಿಸುವ ದಂದೆಯನ್ನಾಗಿ  ಮಾಡಿಕೊಂಡ ನಯವಂಚಕ, ಗೋಮುಖ ವ್ಯಾಘ್ರ ಆರೋಪಿಗಳನ್ನು ಯಾವುದೇ ರಾಜಕೀಯ ಪಕ್ಷ, ಜಾತಿ, ಧರ್ಮ, ಪ್ರಭಾವಿಎಂದು ಗುರುತಿಸದೆ  ಆರೋಪಿಗಳನ್ನು ಆರೋಪಿಗಳಾಗಿ ಗುರುತಿಸಬೇಕಾಗಿದೆ. ಇಂತಹ ಆರೋಪಿಗಳು  ಈ ಸಮಾಜದಲ್ಲಿ ನಾಗರೀಕರ ಜೊತೆ ಬದುಕಲು ಅರ್ಹರ? ಎಂಬ ಪ್ರಶ್ನೆ ಈಗ ನೈಜ ಹೋರಾಟಗಾರರನ್ನು ಕಾಡುತ್ತಿದೆ.

    ಈ ವಿಶೇಷ ತನಿಖಾ ತಂಡಕ್ಕೆ ಕಾಲಮಿತಿಯನ್ನು ನಿಗದಿಪಡಿಸಿ ತ್ವರಿತ ವಿಚಾರಣೆಗಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್ಅನ್ನು ರಚಿಸಿ  ವಿಚಾರಣೆಯನ್ನು ನಡೆಸಬೇಕು.  ಮತ್ತು ಆರೋಪಿಗಳಿಗೆ ಜಾಮೀನುಗಳು ದೊರಕದಂತೆ ಮತ್ತು ಹೆಚ್ಚಿನ ಕಾಲಾವಕಾಶಗಳು ಸಿಗದಂತೆ ಕಾಲಮಿತಿಯೊಳಗೆ ಈ ಪ್ರಕರಣವನ್ನು ಇತ್ಯರ್ಥ ಗೊಳಿಸಿ ರಾಜ್ಯದ ನಾಗರೀಕರ ನೋವಿಗೆ ಸ್ಪಂದಿಸಬೇಕಾಗಿದೆ. ಇಲ್ಲದೇ ಇದ್ದಲ್ಲಿ ಈ ಪ್ರಕರಣವೂ ಸಹ  ರಾಜ್ಯದ ಸಂಪನ್ಮೂಲವನ್ನು ಲೂಟಿ ಮಾಡಿದ ಗಣಿಗಾರಿಕೆ ತನಿಖೆಗೆ ಕರ್ನಾಟಕ ಲೋಕಾಯುಕ್ತವು ನೇಮಿಸಿದ ವಿಶೇಷ ತನಿಖಾ ತಂಡದಂತೆ ಆದರೆ ನ್ಯಾಯ ಸಿಗುವುದು ಮರೀಚಿಕೆಯಾಗಬಹುದು.

    ಈ ಸಾಂಕ್ರಾಮಿಕ ರೋಗ  ಕೋವಿಡ್ 19 ವೈದ್ಯಕೀಯ ಉಪಕರಣಗಳು ಮತ್ತು ಸಾಮಗ್ರಿಗಳ ಖರೀದಿಯಲ್ಲಿ ನಡೆಸಿದ ಭ್ರಷ್ಟಾಚಾರವನ್ನು ತನಿಖೆ ನಡೆಸಿ ಬಯಲಿಗೆಳೆದು ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಮೂರ್ತಿಗಳ ಕಣ್ಗಾವಲಿನಲ್ಲಿ ವಿಶೇಷ ತನಿಖಾ  ತಂಡವನ್ನು ರಚಿಸಬೇಕೆಂದು ಹಾಗೂ ಪ್ರಥಮ ವರ್ತಮಾನ ವರದಿಯನ್ನು ಆರೋಪಿಗಳು ತಪ್ಪಿಸಿಕೊಳ್ಳದ ರೀತಿಯಲ್ಲಿ ಮತ್ತು ತನಿಖೆ ನಡೆಸಿದ ನಂತರ ದೋಷಾರೋಪಣ ಪಟ್ಟಿಯನ್ನು ಕೂಡ ಯಾವುದೇ ಕಾನೂನಿನ ಅಡಿಯಲ್ಲಿ ಆರೋಪಿಗಳು ತಪ್ಪಿಸಿಕೊಳ್ಳದ ರೀತಿಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿ ಸಾಕ್ಷಿಗಳ ಮತ್ತು ದಾಖಲೆಗಳನ್ನು ನ್ಯಾಯಾಲಯದ ಮುಂದೆ ಮಂಡಿಸಿ ಆರೋಪಿಗಳು ಶಿಕ್ಷೆ ವಿಧಿಸುವಲ್ಲಿ ಸರ್ಕಾರವು ಮುಖ್ಯ ಪಾತ್ರ ವಹಿಸಬೇಕೆಂದು ಹಿರಿಯ ಸಾಮಾಜಿಕ ಹೋರಾಟಗಾರ,  ನೈಜ್ಯ ಹೋರಾಟಗಾರರ ವೇದಿಕೆಯ  ಹೆಚ್.ಎಂ.ವೆಂಕಟೇಶ್ ಇ—ಮೇಲ್ ಮೂಲಕ ಮಾಡಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.

    ಹೆಚ್.ಎಂ.ವೆಂಕಟೇಶ್ ಅವರಿಗೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಕುಣಿಗಲ್ ನರಸಿಂಹಮೂರ್ತಿ , ರಾಜ್ಯ ಮಾಹಿತಿ ಹಕ್ಕು ವೇದಿಕೆಯ  ಎಚ್.ಎಸ್.ಸ್ವಾಮಿ, ಮಾಹಿತಿ ಅಧ್ಯಯನ ಕೇಂದ್ರದ  ಮಲ್ಲಿಕಾರ್ಜುನ್ ಎಲ್.ಎಸ್ . ಹಾಗೂ  ಕಾಳಜಿ ಫೌಂಡೇಶನ್ ನ ಜಿ.ಎಲ್. ನಟರಾಜ್ ಅವರು ಸಾಥ್ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.