nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ

    October 3, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!
    • ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ
    • ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌
    • ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ
    • ಮನೆಗೆ ಬಂದ ಶಾಸಕ ಡಾ.ರಂಗನಾಥ್ ಗೆ ವಿಶೇಷ ಭೋಜನ ಬಡಿಸಿದ ದಲಿತ ಮಹಿಳೆ!
    • ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು
    • ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್
    • “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆ: ಸಚಿವ ಎನ್.ಚಲುವರಾಯಸ್ವಾಮಿ,
    ತುಮಕೂರು November 19, 2024

    ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆ: ಸಚಿವ ಎನ್.ಚಲುವರಾಯಸ್ವಾಮಿ,

    By adminNovember 19, 2024No Comments3 Mins Read
    chaluvanarayana swamy

    ಬೆಂಗಳೂರು: ಕೃಷಿ ಇಲಾಖೆಯ ಪ್ರಮುಖ ಆಧಾರ ಸ್ತಂಭಗಳಾದ ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ/ ಪರತಂತ್ರ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿಯನ್ನು ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

    ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಸಚಿವರು ಮಾಹಿತಿ ನೀಡಿದರು.
    ಬೆಳೆಗಳಲ್ಲಿ ಕಂಡುಬರುವ ಕೀಟ/ ರೋಗ ಬಾಧೆ ಹಾಗೂ ಪೋಷಕಾಂಶಗಳ ಕೊರತೆಯನ್ನು ನಿಖರವಾಗಿ ಗುರುತಿಸಿ, ಪೀಡೆ ಬಾಧೆಯ ತೀವ್ರತೆಗನುಗುಣವಾಗಿ ನಿರ್ವಹಣಾ ಕ್ರಮಗಳನ್ನು ರೈತರಿಗೆ ತಲುಪಿಸಲು ಇ-ಸ್ಯಾಪ್ ತಂತ್ರಜ್ಞಾನವನ್ನು ಜಾರಿಗೊಳಿಸಿ ಇಲ್ಲಿಯವರೆಗೆ 70,016 ರೈತರಿಗೆ 1,30,152 ವಿವಿಧ ತಾಂತ್ರಿಕ ಸಲಹೆಗಳನ್ನು ನೀಡಲಾಗಿದೆ ಎಂದು ಸಚಿವರು ಹೇಳಿದರು.


    Provided by
    Provided by
    Provided by

    ಮಣ್ಣು ಪರೀಕ್ಷೆಗೆ ಭೂಸಾರ ಆಪ್ ತಂತ್ರಾಂಶ ಬಳಸಿ 4.76 ಲಕ್ಷ ಮಣ್ಣು ಮಾದರಿಗಳ ಗುರಿಗೆ ಇಲ್ಲಿಯವರೆಗೆ 4.54 ಲಕ್ಷ ಮಣ್ಣು ಮಾದರಿಗಳನ್ನು ಸಂಗ್ರಹಿಸಿದ್ದು, 2.30 ಲಕ್ಷ ಮಣ್ಣು ಮಾದರಿಗಳನ್ನು ವಿಶ್ಲೇಷಿಸಿ 1.58 ಲಕ್ಷ ಮಣ್ಣು ಆರೋಗ್ಯ ಕಾರ್ಡ್ಗಳನ್ನು ವಿತರಿಸಲಾಗಿರುತ್ತದೆ.

    ರಾಜ್ಯದಲ್ಲಿನ 29 ಮಣ್ಣು ಆರೋಗ್ಯ ಕೇಂದ್ರಗಳ ಪೈಕಿ 26 ಕೇಂದ್ರಗಳಿಗೆ NABL recognition ಪಡೆಯಲಾಗಿದೆ ಎಂದು ಹೇಳಿದರು.

    ಕೇಂದ್ರ ಪುರಸ್ಕೃತ ಯೋಜನೆಗಳಡಿ 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ರೂ.297 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಪಡೆಯಲಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

    ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಬಿತ್ತನೆ ಬೀಜ ವಿತರಣೆ ಹಾಗೂ ರಸಗೊಬ್ಬರ ಪೂರೈಕೆಯನ್ನು ಯಾವುದೇ ಕೊರತೆ ಮತ್ತು ದೂರು ಇಲ್ಲದಂತೆ ನಿರ್ವಹಿಸಲಾಗಿದೆ. 2023-24ನೇ ಸಾಲಿನಲ್ಲಿ 13 ಲಕ್ಷ ರೈತರಿಗೆ 5.77 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ವಿತರಣೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 12.92 ಲಕ್ಷ ಫಲಾನುಭವಿಗಳಿಗೆ 6.11ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಇಲ್ಲಿಯವರೆಗೆ ವಿತರಣೆ ಮಾಡಲಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ 46,000 ಕ್ವಿಂಟಾಲ್ ಹೆಚ್ಚುವರಿ ಬಿತ್ತನೆ ಬೀಜವನ್ನು ಸಹಾಯಧನದಡಿಯಲ್ಲಿ ವಿತರಿಸಲಾಗಿದೆ. ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

    ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರಿಗೆ , ಮಾರುಕಟ್ಟೆದಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಸಂಪರ್ಕವನ್ನು ವಿಸ್ತರಿಸಲು ಮತ್ತು ಆರೋಗ್ಯವನ್ನು ಸುಧಾರಿಸಲು ಸಾವಯವ ಮತ್ತು ಸಿರಿಧಾನ್ಯ ಹಬ್ ನ್ನು ಹೆಬ್ಬಾಳ, ಬೆಂಗಳೂರಿನಲ್ಲಿ ರೂ.20.00 ಕೋಟಿ ಅನುದಾನದಲ್ಲಿ ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ನೀಡಿದೆ ಎಂದು ಕೃಷಿ ಸಚಿವರು ತಿಳಿಸಿದರು.

    2023–24ನೇ ಸಾಲಿನಲ್ಲಿ 3.07 ಲಕ್ಷ ರೈತರಿಗೆ 3.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ/ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ರೂ. 627.10 ಕೋಟಿ ಸಹಾಯಧನವನ್ನು ನೀಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 109250 ರೈತ ಫಲಾನುಭವಿಗಳಿಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಸಹಾಯಧನ ನೀಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

    2023–24ನೇ ಸಾಲಿನಲ್ಲಿ ಕೃಷಿಯಲ್ಲಿ ಯಾಂತ್ರೀಕತೆಯನ್ನು ಪ್ರೋತ್ಸಾಹಿಸಲು ಅನುವಾಗುವಂತೆ ರೂ.433.92 ಕೋಟಿಗಳ ವೆಚ್ಚದಲ್ಲಿ 1,16,181 ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 20301 ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ವಿತರಣೆ ಮಾಡಲಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 2023-24ನೇ ಸಾಲಿನಲ್ಲಿ 104 ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗೆ ರೂ.41.39 ಕೋಟಿಗಳ ಸಹಾಯಧನ ನೀಡಲಾಗಿದ್ದು, 2024–25ನೇ ಸಾಲಿನಲ್ಲಿ 100 ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ರೂ. 45.00 ಕೋಟಿಗಳ ಅನುದಾನದಲ್ಲಿ ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು.

    2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿವಿಧ ಕೃಷಿ ಬೆಳೆಗಳನ್ನು 82.48 ಲಕ್ಷ ಹೆಕ್ಟೇರ್ ಗುರಿಗೆ 81.36 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.99 ರಷ್ಟು ಬಿತ್ತನೆಯಾಗಿರುತ್ತದೆ. ದಿನಾಂಕ:15.11.2024 ವರೆಗೆ 2024–25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳ ಪ್ರಸ್ತಾವಿತ ಬಿತ್ತನೆ ಗುರಿ 25.53 ಲಕ್ಷ ಹೆಕ್ಟೇರ್ ಪ್ರತಿಯಾಗಿ 13.38 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.52ರಷ್ಟು ಬಿತ್ತನೆಯಾಗಿದ್ದು ಡಿಸೆಂಬರ್ವರೆಗೂ ಬಿತ್ತನೆಯಾಗಲಿದೆ ಎಂದು ತಿಳಿಸಿದರು.

    ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 17.61 ಲಕ್ಷ ರೈತ ಫಲಾನುಭವಿಗಳಿಗೆ ರೂ.2021.17 ಕೋಟಿಗಳ ಬೆಳೆ ವಿಮೆ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಪ್ರಸಕ್ತ ಮುಂಗಾರು 2024ರ ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೇಕ್ಟೆರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, 2024–25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 25148 ರೈತ ಪ್ರಸ್ತಾವನೆಗಳು 31690.28 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದ್ದು ನೋಂದಣಿ ಕಾರ್ಯವು ಪ್ರಗತಿಯಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

    ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಯೋಜನೆ:

    ದ್ವಿದಳ ಧಾನ್ಯ ಪ್ರಾತ್ಯಕ್ಷಿಕೆಗಳಿಗೆ 2024-25ನೇ ಸಾಲಿನಲ್ಲಿ 121.56 ಕೋಟಿ ಹಾಗೂ ಹೆಚ್ಚುವರಿ ಅನುದಾನ 63.42ಕೋಟಿ ಒಳಗೊಂಡಂತೆ ಒಟ್ಟು 184.98ಕೋಟಿ ಅನುದಾನದಲ್ಲಿ ದ್ವಿದಳ ಧಾನ್ಯ ವಿಸ್ತೀರ್ಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

    ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಯೋಜನೆ:

    ದ್ವಿದಳ ಧಾನ್ಯ ಕಾರ್ಯಕ್ರಮದಡಿ 100ಹೆಕ್ಟೇರ್ ಪ್ರದೇಶದಂತೆ ಗುಚ್ಚ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು 75,500 ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯಗಳ ನೂತನ ತಾಂತ್ರಿಕತೆಗಳ ಪರಿಚಯಗಳ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳಲಾಗಿದೆ ಅಲ್ಲದೇ ಬೆಳೆ ಸಾಂದ್ರತೆ (Croping Intensity) : ಶೇ.100ರಿಂದ ಶೇ.175ರಷ್ಟು ಹೆಚ್ಚಳವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

    ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತರು ವೈ.ಎಸ್.ಪಾಟೀಲ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರು ಮಹೇಶ್ ಶಿರೂರು, ನಿರ್ದೇಶಕ ಬಂತನಾಳ, ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರು ದೇವರಾಜು ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು

    October 3, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    ತುಮಕೂರು: ಸರ್ಕಾರದ ಆದೇಶದಂತೆ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯೊಬ್ಬರಿಗೆ ಧರ್ಮದ ಹೆಸರಿನಲ್ಲಿ ಅವಮಾನಿಸಿ, ಸಮೀಕ್ಷೆಗೆ ಅವಕಾಶ ನೀಡದೇ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ವಿಡಿಯೋವೊಂದು…

    ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ

    October 3, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ

    October 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.