ಬೆಂಗಳೂರು: ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂದರ್ಭದಲ್ಲಿ ಗಾಂಜಾ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನ ಮಡಿವಾಳ ಹಾಗೂ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂನ ಮೊಹಿಸಿನ್ ಬರಬುಯಾ(25), ಒಡಿಶಾದ ಅಭಯ್ ಕುಮಾರ್ (26), ಚಿರೋನ್ ನಾಯಕ್(26) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಒಡಿಶಾದಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟಕ್ಕೆ ಮುಂದಾಗಿದ್ದರು ಎನ್ನಲಾಗಿದೆ.
ಆರೋಪಿಗಳಿಂದ 14.20 ಲಕ್ಷ ಮೌಲ್ಯದ 7 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿವಾಳ ಸಮೀಪದ ಪಬ್ ವೊಂದರಲ್ಲಿ ಆರೋಪಿಗಳಾದ ಮೊಹಿಸಿನ್ ಮತ್ತು ಅಭಯ್ ಕೆಲಸ ಮಾಡುತ್ತಿದ್ದರು. ಕ್ರಿಸ್‍ಮಸ್, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಗಾಂಜಾಕ್ಕೆ ಭಾರೀ ಬೇಡಿಕೆ ಇರುತ್ತದೆ. ಪಬ್ ಗಳಲ್ಲಿ ಗಾಂಜಾ ಮಾರಾಟ ಮಾಡಬಹುದು ಎಂದು ಯೋಜಿಸಿದ್ದರು. ಗಾಂಜಾ ತಂದು ಕೊಡು ಎಂದು ಮತ್ತೊಬ್ಬ ಆರೋಪಿ ಚಿರೋನ್ ಗೆ ಸೂಚಿಸಿದ್ದರು. ಆತ ಕೆಲವು ದಿನಗಳ ಹಿಂದೆ ಗಾಂಜಾ ತಂದಿದ್ದ. ಈ ಖಚಿತ ಮಾಹಿತಿ ಆಧರಿಸಿ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಬನ್ನಪ್ಪ ರಸ್ತೆ ಬಳಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲದ ಪ್ರವೀಣ್(30) ಬಂಧಿತ. ಆರೋಪಿಯಿಂದ 4 ಲಕ್ಷ ಮೌಲ್ಯದ 12 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q