nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025
    Facebook Twitter Instagram
    ಟ್ರೆಂಡಿಂಗ್
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್
    • ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈದ್ಯರಿಲ್ಲದೆ ಸಕಾಲದಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆಯಿಲ್ಲ: ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನ ಸುರಿಮಳೆ
    ತುಮಕೂರು November 20, 2024

    ವೈದ್ಯರಿಲ್ಲದೆ ಸಕಾಲದಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆಯಿಲ್ಲ: ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನ ಸುರಿಮಳೆ

    By adminNovember 20, 2024No Comments3 Mins Read
    shubha kalyan

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಸಕಾಲದಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಎಕ್ಸರೇ, ಇಸಿಜಿ ಯಂತ್ರಗಳು ಕೆಟ್ಟುಹೋಗಿವೆ. ಲಭ್ಯವಿರುವ ಬೆರಳೆಣಿಕೆಯಷ್ಟು ವೈದ್ಯರು ಕ್ಲಿನಿಕ್‌ ಗಳನ್ನು ತೆರೆದು ರೋಗಿಗಳನ್ನು ತಮ್ಮ ಕ್ಲಿನಿಕ್‌ ಗಳಿಗೆ ಶಿಫಾರಸ್ಸು ಮಾಡುತ್ತಿದ್ದಾರೆಂದು ತಾಲ್ಲೂಕು ಆಸ್ಪತ್ರೆಯ ವೈಫಲ್ಯಗಳ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಬಳಿ ದೂರುಗಳ ಸುರಿಮಳೆಗೈದರು.

    ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ನವೆಂಬರ್ 12ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿರುವ ಆಸ್ಪತ್ರೆ, ವಿದ್ಯಾರ್ಥಿನಿಲಯ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುರುವೇಕೆರೆ ತಾಲ್ಲೂಕು ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆ ಸೇವೆಯ ಬಗ್ಗೆ ಸಾರ್ವಜನಿಕರು ದೂರುಗಳನ್ನು ಹೇಳಿಕೊಂಡರು.


    Provided by
    Provided by
    Provided by

    ತಾಲ್ಲೂಕು ಆಸ್ಪತ್ರೆಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಆಸ್ಪತ್ರೆ ಸಮಸ್ಯೆಗಳ ಚಿತ್ರಣದ ಬಗ್ಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು.

    ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಂಗನಾಥ್ ಅವರಿಂದ ಮಾಹಿತಿ ಪಡೆದ ಅವರು ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಲು ಸುಸಜ್ಜಿತ ಕಟ್ಟಡವಿದ್ದರೂ ವೈದ್ಯರ ಕೊರತೆ ಎದ್ದುಕಾಣುತ್ತಿದೆ. ಕೂಡಲೇ ಹುದ್ದೆಗಳ ನೇಮಕಾತಿಗಾಗಿ ಕ್ರಮಕೈಗೊಳ್ಳುವ ಬಗ್ಗೆ ಪತ್ರ ಸಿದ್ಧಪಡಿಸಲು ನಿರ್ದೇಶನ ನೀಡಿದರು.

    ಆಸ್ಪತ್ರೆಯಲ್ಲಿರುವ ಔಷಧಿ ವಿತರಣಾ ಕೊಠಡಿ, ಚುಚ್ಚುಮದ್ದು ಕೊಠಡಿ, ಡಯಾಲಿಸಿಸ್ ಕೇಂದ್ರ, ಪುರುಷರ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

    ಮಕ್ಕಳ ತಜ್ಞರಿಲ್ಲ, ಸ್ತ್ರೀರೋಗ ತಜ್ಞರಿಲ್ಲ, ಗರ್ಭಿಣಿ ಸ್ತ್ರೀಯರ ಹೆರಿಗೆಗಾಗಿ ತಾಲ್ಲೂಕಿನ ಜನರು ದೂರದ ತುಮಕೂರು, ತಿಪಟೂರಿಗೆ ಹೋಗುವ ಪರಿಸ್ಥಿತಿ ಇದೆ ಎಂದು ಪಟ್ಟಣ ಪಂಜಾಯಿತಿ ಸದಸ್ಯ ಚಿದಾನಂದ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತಾ ತಾಲ್ಲೂಕಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ವೈದ್ಯರ ಕೊರತೆಯನ್ನು ಪರಿಹರಿಸಬೇಕೆಂದು ಮನವಿ ಮಾಡಿದರು.

    ಒಳರೋಗಿಯಾಗಿ ದಾಖಲಾದ ರೋಗಿಗಳಿಗೆ ಸ್ಥಳೀಯವಾಗಿ ಆಸ್ಪತ್ರೆಯಲ್ಲಿಯೇ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ನೀಡಬೇಕು. ಹೊರಗಿನಿಂದ ತರಿಸಬಾರದು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗೆ ತಾಕೀತು ಮಾಡಿದರು.

    ಚಿಕಿತ್ಸೆಗಾಗಿ ವೈದ್ಯರನ್ನೇ ಕಾಯುತ್ತಿದ್ದ ರೈತರನ್ನು ಮಾತನಾಡಿಸಿ ಮಳೆ–ಬೆಳೆ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಗೃಹಲಕ್ಷ್ಮೀ ಯೋಜನೆಯಡಿ ಸರ್ಕಾರದಿಂದ ನೀಡಲಾಗುತ್ತಿರುವ ಮಾಹೆಯಾನ 2,000 ರೂ.ಗಳ ಹಣ ಖಾತೆಗೆ ಜಮೆಯಾಗುತ್ತಿರುವ ಬಗ್ಗೆ ಮಹಿಳೆಯರಿಂದ ಮಾಹಿತಿ ಪಡೆದರಲ್ಲದೆ, ಬೆಳೆ ನಷ್ಟ ಹೊಂದಿರುವ ರೈತರು ಪರಿಹಾರಕ್ಕಾಗಿ ಕೃಷಿ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

    ರೈತರೊಬ್ಬರು ಕೃಷಿ ಸಾಲವನ್ನು ತೀರಿಸಬೇಕೆಂದು ಬ್ಯಾಂಕಿನವರು ಒತ್ತಾಯಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು ರೈತರು ಕೃಷಿಗಾಗಿ ಪಡೆದಿರುವ ಸಾಲದ ಮೊತ್ತವನ್ನು ಮರು ಪಾವತಿಸಬೇಕೆಂದು ಬ್ಯಾಂಕುಗಳು ಒತ್ತಡ ಹೇರಬಾರದೆಂದು ಈಗಾಗಲೇ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ವಸತಿ ನಿಲಯಗಳ ನಿರ್ಮಾಣಕ್ಕೆ 73 ನಿವೇಶನಗಳ ಹಸ್ತಾಂತರ:

    ತುರುವೇಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಭೇಟಿ ಬಳಿಕ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಪರಿವೀಕ್ಷಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಸೇವೆ ಒದಗಿಸುವ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿರುವ ಬಗ್ಗೆ ಪರಿಶೀಲಿಸಲು ತುರುವೇಕೆರೆ ತಾಲ್ಲೂಕಿನ ಆಸ್ಪತ್ರೆ, ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ರೋಗಿಗಳ ಪರದಾಟ ಅರ್ಥವಾಗಿದೆ. ವೈದ್ಯರ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ತಿಳಿಸಿದರು.

    ತುರುವೇಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ರೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, 1 ತಿಂಗಳೊಳಗಾಗಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

    ಬಾಡಿಗೆ ಕಟ್ಟಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣಕ್ಕಾಗಿ ಜಿಲ್ಲೆಯಲ್ಲಿ ಈವರೆಗೆ 73 ಸರ್ಕಾರಿ ಜಾಗವನ್ನು ಗುರುತಿಸಿ ಇಲಾಖೆಗಳಿಗೆ ಹಸ್ತಾಂತರಿಸಲಾಗಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾದ ನಂತರ ಸ್ವಂತ ಕಟ್ಟಡ ನಿರ್ಮಾಣಕ್ಕೆ ಇಲಾಖೆಗಳು ಕ್ರಮ ಕೈಗೊಳ್ಳಲಿವೆ ಎಂದು ತಿಳಿಸಿದರು.

    ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ:

    ಇತ್ತೀಚಿಗೆ ತುರುವೇಕೆರೆ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಮಾದಕ ವಸ್ತುಗಳ ಜಾಲದ ಕಡಿವಾಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಾದಕ ವಸ್ತುಗಳ ಮಾರಾಟ ನಿಯಂತ್ರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮಾದಕ ವಸ್ತುಗಳ ಬೇಡಿಕೆಯನ್ನು ನಿಯಂತ್ರಿಸಿದಾಗ ಮಾತ್ರ ಮಾದಕ ದ್ರವ್ಯಗಳ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ತಿಳಿಸಿದರಲ್ಲದೆ, ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.

    ಈ ಸಂದರ್ಭದಲ್ಲಿ ತುರುವೇಕೆರೆ ತಾಲೂಕಿನ ತಹಶೀಲ್ದಾರ್ ಎನ್.ಎ. ಕುಂಞ ಅಹಮ್ಮದ್, ಕಂದಾಯ ಇಲಾಖೆ, ಆರೋಗ್ಯ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ನೀರು ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ಗೃಹ ಸಚಿವರ ತವರಿನಲ್ಲಿ ಭೀಕರ ಘಟನೆ

    September 11, 2025

    ಮಹಿಳಾ ದೌರ್ಜನ್ಯ ಸಹಾಯವಾಣಿ ಸಂಖ್ಯೆ 181 ಸ್ಥಾಪನೆ

    September 11, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025

    ಹಾದನೂರು ಚಂದ್ರ ಸರಗೂರು: ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ನೆರವಾಗುವ ಸಲುವಾಗಿ ತಮ್ಮ ಸ್ವಂತ ಹಣ ಹಾಗೂ ಪ್ರದೇಶವನ್ನು ಬಡಗಿಯೊಬ್ಬರು…

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.