ಬೀದರ್: ಜಿಲ್ಲೆಯ ಕೆಲವೊಂದು ಖಾಸಗಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಭೋದಿಸುತ್ತಿಲ್ಲ, ಇದರ ವಿರುದ್ಧ ಕ್ರಮಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ(ಭೀಮವಾದ) ಬೀದರ್ ಜಿಲ್ಲಾ ಶಾಖೆ ವತಿಯಿಂದ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿತು.
ಸಂವಿಧಾನ ಪೀಠಿಕೆ ಬೋಧಿಸದ ಶಾಲಾ—ಕಾಲೇಜುಗಳ ಪರವಾನಗಿಯನ್ನು ರದ್ದುಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರು ಸಂಜು ಕುಮಾರ್ ಮೇತ್ರ ಮತ್ತು ದಶರತ್ ದೊಡ್ಡಮನಿ ಬೀದರ್ ಜಿಲ್ಲಾ ಸಂಘಟನಾ ಸಂಚಾಲಕರು, ಭೀಮವಾದ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರು ಔರಾದ್, ತುಕಾರಾಮ ಹಸನ್ಮುಖಿ , ಬಸವರಾಜ್ ಅಲ್ಲಾಪುರ್, ಮಲ್ಲಿಕಾರ್ಜುನ್ ಜೋನ್ಕೇರಿ ಹಾಗೂ ಇನ್ನಿತರರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296