ಬೆಂಗಳೂರು: ವಿಧಾನ ಸಭಾ ಉಪಚುನಾವಣಾ ಮತ ಎಣಿಕೆ ಇಂದು ನಡೆದಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ನ ಸಿ.ಪಿ.ಯೋಗೇಶ್ವರ್ ಎದುರು ಸೋಲನುಭವಿಸಿದ್ದಾರೆ. ಯೋಗೇಶ್ವರ್ ಅವರು 25,515 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
ಭರತ್ ಬೊಮ್ಮಾಯಿ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದಲ್ಲಿ ಸೋಲನುಭವಿಸಿದ್ದು, ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ದಾಖಲಿಸಿದ್ದಾರೆ.
ಬಳ್ಳಾರಿ ಗಣಿಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ– ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q