ಸಂಭಾಲ್: ಸಂಭಾಲ್ ಮಸೀದಿ ಸಮೀಕ್ಷೆಯ ವೇಳೆ ಕಲ್ಲು ತೂರಾಟ ನಡೆದ ಘಟನೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಲಘುಲಾಠಿ ಪ್ರಹಾರ ನಡೆಸಿದ್ದಾರೆ.
ಇದು ಪುರಾತನ ಹಿಂದೂ ಹರಿಹರ ದೇವಾಲಯವಾಗಿದ್ದು ಸಂಭಾಲ್ ಮಸೀದಿ ನಿರ್ಮಿಸಲಾಗಿದೆ ಎಂಬ ಪ್ರಕರಣ ಕುರಿತು ಸ್ಥಳೀಯ ನ್ಯಾಯಾಲಯದ ಸಮೀಕ್ಷೆಗೆ ಆದೇಶದ ನೀಡಿತ್ತು. ಸ್ಥಳೀಯ ಆಡಳಿತದ ಪ್ರಕಾರ, ವಿವಾದಿತ ಜಾಗದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಬೆಳಿಗ್ಗೆ 7 ಗಂಟೆಗೆ ಸಮೀಕ್ಷೆ ಪ್ರಾರಂಭವಾದಾಗ ಜನಸಂದಣಿ ನೆರೆದಿದೆ.
ಸ್ಥಳದಲ್ಲಿ ಜಮಾಯಿಸಿದ ಜನಸಂದಣಿಯಿಂದ ಕೆಲವು ದುಷ್ಕರ್ಮಿಗಳು ಭದ್ರತೆಗೆ ಇದ್ದ ಪೊಲೀಸ್ ಮೇಲೆ ಕಲ್ಲು ತೂರಿದರು. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿ ನಂತರಅಶ್ರುವಾಯು ಬಳಸಿದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296