nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಕುಂಡಿ: 5 ಬಾವಿ ಹಾಗೂ 5 ಶಾಸನ ಸೇರಿದಂತೆ 600 ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಲಭ್ಯ
    ಜಿಲ್ಲಾ ಸುದ್ದಿ November 24, 2024

    ಲಕ್ಕುಂಡಿ: 5 ಬಾವಿ ಹಾಗೂ 5 ಶಾಸನ ಸೇರಿದಂತೆ 600 ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಲಭ್ಯ

    By adminNovember 24, 2024No Comments2 Mins Read
    lakkundi

    ಗದಗ: ಲಕ್ಕುಂಡಿಯಲ್ಲಿ ಜರುಗುತ್ತಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆಯಲ್ಲಿ 5 ಬಾವಿ ಹಾಗೂ ಐದು ಶಾಸನಗಳು ಸೇರಿದಂತೆ 600ಕ್ಕೂ ಅಧಿಕ ಪ್ರಾಚ್ಯಾವಶೇಷಗಳು ಲಭ್ಯವಾಗಿವೆ ಎಂದು ಸಚಿವ ಎಚ್.ಕೆ.ಪಾಟೀಲ್ ಅವರು ಹೇಳಿದರು.

    ಲಕ್ಕುಂಡಿ ಗ್ರಾಮದಲ್ಲಿ ಭಾನುವಾರ  ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಕುಂಡಿಯನ್ನು ರಾಷ್ಟ್ರಕೂಟರ ಕಾಲದಲ್ಲಿ ಕಟ್ಟಿದ್ದಾರೆ. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ವಿಶೇಷ ಅಭಿವೃದ್ಧಿ ಹೊಂದಿ ಕಲಚುರ್ಯರು, ಹೊಯ್ಸಳ ರು, ಕೆಲವು ಕಾಲ ವಿಜಯನಗರದ ಅರಸರು ಆಳಿದ್ದಾರೆ. ಇಂದು ಪ್ರಾಚ್ಯಾವಶೇಷಗಳ ಅನ್ವೇಷಣೆ ಸಂಗ್ರಹಣೆ ಕೆಲಸವೂ ವಿಶೇಷ ಪ್ರಯತ್ನವಾಗಿದ್ದು ಸಾಂಸ್ಕೃತಿಕ, ಐತಿಹಾಸಿಕ, ಕಾಂತ್ರಿಕಾರಿಕ ಹೆಜ್ಜೆ ಎಂದರು.


    Provided by
    Provided by

    ನವೆಂಬರ್ 22, 23 ಮತ್ತು24 ರಂದು ಪ್ರಾಚ್ಯಾವಶೇಷಗಳ ಅನ್ವೇಷಣೆ ಕೈಗೊಂಡು  ಲಕ್ಕುಂಡಿಯಲ್ಲಿ  ಈ ಹಿಂದೆ ಇದ್ದ 101 ದೇವಾಲಯಗಳಲ್ಲಿ ಇಂದು 50–60 ಲಭ್ಯವಾಗಿದೆ ಹಾಗೂ 8–10 ದೇವಾಲಯದ ಪಾಯಗಳು ದೊರಕಿವೆ. ಇನ್ನೂ ಉಳಿದ ದೇವಾಲಯಗಳು ಎಲ್ಲೆಲ್ಲಿ ಇದ್ದವು ಎಂದು ಗುರುತಿಸುವ ಬಹು ದೊಡ್ಡ ಕೆಲಸವಾಗಿದೆ ಹಾಗೂ ಹುದುಗಿಹೋದ ದೇವಾಲಯಗಳಲ್ಲಿ ಮರುಸೃಷ್ಟಿಸಬಹುದಾದ ದೇವಾಲಯ ಬಗ್ಗೆ  ತಜ್ಞರು ಗಂಭೀರ ಆಲೋಚನೆ ಮಾಡುತ್ತಿದ್ದಾರೆ ಎಂದರು.

    ಅನ್ವೇಷಣೆ ಸಂದರ್ಭದಲ್ಲಿ 5 ಹಳೆ ಬಾವಿಗಳು ಹೊಸದಾಗಿ ಸಿಕ್ಕಿದೆ ಹಾಗೂ 5 ಶಾಸನ ಲಭ್ಯವಾಗಿದೆ. ಅದರಲ್ಲಿ 3 ಶಾಸನಗಳು ಸಂಪೂರ್ಣ ಅಪ್ರಕಟಿತವಾಗಿದೆ.  2 ಅಪ್ರಕಟಿತವಾಗಿದೆ ಎಂದು ತಿಳಿಸಿದರು.

    ಈ ಕಾರ್ಯ ಎಲ್ಲರನ್ನೂ ಹುಮ್ಮಸ್ಸುಗೊಳಿಸಿದೆ, ಸರ್ಕಾರ ಕೆಲಸದಿಂದ ಇತಿಹಾಸವಿರುವ ಗ್ರಾಮಗಳಲ್ಲಿ ಯಾವ ರೀತಿ ಕಾರ್ಯ ಕೈಗೊಳ್ಳಬಹುದು ಎನ್ನುವುದರ ಬಗ್ಗೆ ದಿಕ್ಸೂಚಿ ಆಗಿದೆ ಎಂದು ಹೇಳಿದರು.

    ಇಂದು 13 ಗುಡಿಗಳನ್ನು ರಕ್ಷಿತ ಸ್ಮಾರಕ ಎಂದು ಪೋಷಿಸಲು ಸರ್ಕಾರ ನಿರ್ಣಾಯ ಮಾಡಿದೆ ಹಾಗೂ 1 ಮಠದಲ್ಲಿ ವಾಸಮಾಡುತ್ತಿರುವ ಮಾಲಿಕರು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಬಿಟ್ಟುಕೊಟ್ಟಿದ್ದಾರೆ. ಸ್ವ ಇಚ್ಛೆಯಿಂದ ಬಿಟ್ಟು ಕೊಟ್ಟ ಅವರಿಗೆ ಸರ್ಕಾರದಿಂದ ವಿಶೇಷ ಗೌರವ ನೀಡಲಾಗಿದೆ ಹಾಗೂ ಇನ್ನೂ  4 ಹತ್ತಿರ ವಾಸಮಾಡುತ್ತಿರುವ ಗುಡಿಗಳನ್ನು ಸರ್ಕಾರ ಪಡೆದುಕೊಳ್ಳುವುದಕ್ಕೆ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿದರು.

    13 ಸ್ಮಾರಕಗಳ ಸಂರಕ್ಷಣಾ ಕೆಲಸ ಪ್ರಾರಂಭವಾಗಿದೆ. ಮೊದಲು ಭೂಮಿಯ ಮೇಲ್ಭಾಗದಲ್ಲಿ ಲಭ್ಯವಿರುವ ಸ್ಮಾರಕಗಳನ್ನು ಸಂಗ್ರಹಿಸುಲಾಗುತ್ತದೆ. ಆನಂತರ ಡಿಸೆಂಬರ್ ಅಂತ್ಯದ ಒಳಗೆ ಉತ್ಖನನ ಕೆಲಸ ಪ್ರಾರಂಭಿಸಲಾಗುತ್ತದೆ ಹಾಗೂ ಕೋಟೆಯನ್ನು ಅಭಿವೃದ್ಧಿಪಡಿಸಿ ಲಕ್ಕುಂಡಿಯನ್ನು ಪ್ರವಾಸೋದ್ಯಮ ತಾಣವನ್ನಾಗಿಸಿ, ಇತಿಹಾಸವನ್ನು ತಿಳಿಯಲು ಬರುವವರಿಗೆ ಶ್ರೇಷ್ಠ ಕೇಂದ್ರವನ್ನಾಗಿಸಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯದಿಂದ  ಲಕ್ಕುಂಡಿಯನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ಹತ್ತಿರ ತೆಗೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು.

    ಶಾಸಕರಾದ ಸಿ.ಸಿ.ಪಾಟೀಲ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿಯ ಸದಸ್ಯ,ಸಿದ್ಧಲಿಂಗೇಶ್ವರ ಎಚ್. ಪಾಟೀಲ,ಸೇರಿದಂತೆ ಉಳಿದ ಅಧಿಕಾರಿಗಳು ಹಾಜರಿದ್ದರು.

    1050 ಪ್ರಾಚ್ಯಾವಶೇಷಗಳು ಪತ್ತೆ:

    ಲಕ್ಕುಂಡಿಯಲ್ಲಿ ನಡೆದ ಪ್ರಾಚ್ಯಾವಶೇಷ ಅನ್ವೇಷಣೆಯಲ್ಲಿ ಸಾಯಂಕಾಲದ ವೇಳೆಗೆ 13 ಶಾಸನ ಸೇರಿದಂತೆ ಒಟ್ಟಾರೆ 1050 ಪ್ರಾಚ್ಯಾವಶೇಷಗಳು ಪತ್ಯೆಯಾಗಿವೆ. ಇವುಗಳಲ್ಲಿ ಪ್ರಮುಖವಾಗಿ ಗತಕಾಲದ ನಾಣ್ಯಗಳು, ದೇವರ ಮೂರ್ತಿಗಳು, ಶಿಲ್ಪ ಕಲೆ, ಶಿಲಾಮಂಟಪ ಅವಶೇಷಗಳು ಹಾಗೂ ಶಿಲಾಯುಗದ ಹಲವಾರು ಪಳವಳಿಕೆಗಳು ದೊರೆತಿವೆ. 3500 ವರ್ಷಗಳ ಹಿಂದಿನ ಶಿಲಾಯುಗದ ಕಲ್ಲಿನ ಆಯುಧ ಪತ್ತೆಯಾಗಿರುವುದು ವಿಶೇಷ.

    ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ಕೆ ಜನಪದ  ಕಲಾತಂಡ, ಪೊಲೀಸ್ ಬ್ಯಾಂಡ್ ಮೆರಗು ನೀಡಿತು. ಜೊತೆಗೆ ಗ್ರಾಮದ ಮಹಿಳೆಯರು ಸ್ವಯಂ ಪ್ರೇರಿತರಾಗಿ ಪೂರ್ಣ ಕುಂಭದೊಂದಿಗೆ ಪ್ರಮುಖ ದೀಪಗಳಲ್ಲಿ ಚಲಿಸಿದರು, ಜನಪ್ರತಿನಿಧಿಗಳು  ಹಾಗೂ ಅಧಿಕಾರಿಗಳ   ಅನ್ವೇಷಣೆಯ  ಪ್ರತಿ ತಂಡಕ್ಕೆ ಒಂದೊಂದು ಕಲಾ ತಂಡ ಇದ್ದು ಪ್ರಾಚ್ಯಾವಶೇಷಗಳಿಗೆ ವಿಶೇಷ ಆತಿಥ್ಯದೊಂದಿಗೆ ಸಂಗ್ರಹಿಸುವ ಕಾರ್ಯ ಭರದಿಂದ ಸಾಗಿತು ಒಟ್ಟಾರೆ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯ ಯಶಸ್ವಿಯಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.