ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಮಸೀದಿ ಸಮೀಕ್ಷೆಯ ವೇಳೆ ನಡೆದ ಹಿಂಸಾಚಾರದಲ್ಲಿ 4 ಜನರು ಸಾವನ್ನಪ್ಪಿದ್ದು, ಘಟನೆಯ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸರ್ವೇಗೆ ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೇಗೆ ಮುಂದಾಗಿದ್ದ ವೇಳೆ ಉದ್ರಿಕ್ತರು ಕಲ್ಲುತೂರಾಟ ನಡೆಸಿದ್ದರು. ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಇದರಿಂದಾಗಿ ಸಾಂಭಾಲ್ ನಲ್ಲಿ ಸಂಪೂರ್ಣ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ.
ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯನ್ನು ಹಿಂದೂ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ವಿವಾದಾ ಕಾನೂನು ಹೋರಾಟದ ಕೇಂದ್ರವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q