ಉತ್ತರಪ್ರದೇಶ: ಗೂಗಲ್ ಮ್ಯಾಪ್ ನೀಡಿದ ದಾರಿಯನ್ನು ನಂಬಿ ಕಾರಿನಲ್ಲಿ ಹೊರಟಿದ್ದ ಮೂವರು ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ವಿವೇಕ್ ಮತ್ತು ಅಮಿತ್ ಹಾಗೂ ಇನ್ನೋರ್ವ ವ್ಯಕ್ತಿ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ. ಇವರು ಮೂವರೂ ಮದುವೆ ಕಾರ್ಯಕ್ರಮಕ್ಕಾಗಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಶನಿವಾರ ಬಾಡಿಗೆ ಕಾರೊಂದರಲ್ಲಿ ಗುರುಗ್ರಾಮದಿಂದ ಉತ್ತರಪ್ರದೇಶದ ಬರೇಲಿಗೆ ಈ ಮೂವರು ಹೊರಟಿದ್ದರು. ಈ ವೇಳೆ ಮಾರ್ಗ ಸರಿಯಾಗಿ ಗೊತ್ತಿರದ ಕಾರಣ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ವಾಹನ ಚಲಾಯಿಸಿದ್ದರು. ಅದರಂತೆ ಬರೇಲಿ ಸಮೀಪದ ನಿರ್ಮಾಣ ಹಂತದ ಸೇತುವೆಯ ದಾರಿ ತೋರಿಸಿದೆ ಅದರಂತೆ ಕಾರು ಚಾಲಕ ಅದೇ ಮಾರ್ಗವನ್ನು ಅನುಸರಿಸಿಕೊಂಡು ಹೋಗಿದ್ದಾದ್ದಾರೆ. ಆದರೆ ಸೇತುವೆ ಅಪೂರ್ಣಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಸುಮಾರು ಐವತ್ತು ಅಡಿ ಆಳದ ರಾಮಗಂಗಾ ನದಿಗೆ ಬಿದ್ದಿದೆ ಅಷ್ಟೋತ್ತಿಗಾಗಲೇ ರಾತ್ರಿಯಾಗಿದ್ದ ಕಾರಣ ವಿಚಾರ ಯಾರಿಗೂ ಗೊತ್ತಾಗಿಲ್ಲ ಮರುದಿನ ಭಾನುವಾರ ಬೆಳಿಗ್ಗೆ ಅಲ್ಲಿನ ಸ್ಥಳೀಯರು ನದಿಗೆ ಬಿದ್ದಿರುವ ಕಾರೊಂದನ್ನು ಗಮನಿಸಿದ್ದಾರೆ ಬಳಿಕ ಕಾರಿನ ಬಳಿ ತೆರಳಿದ್ದಾರೆ ಈ ವೇಳೆ ಕಾರಿನಲ್ಲಿ ಮೂವರು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.
ಘಟನೆಗೆ ಸೇತುವೆ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಸೇತುವೆಗೆ ಬ್ಯಾರಿಕೇಡ್ ಇಲ್ಲದ ಕಾರಣ ಮುಂದಿರುವ ಅಪಾಯ ತಿಳಿಯದೇ ಮೂವರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296