ಚಿಕ್ಕನಾಯಕನಹಳ್ಳಿ: ತಾಲೂಕಿನ ಹಂದನಕೆರೆ ಗ್ರಾಮದ ಜನರು ಸರಿಯಾದ ಆ್ಯಂಬುಲೆನ್ಸ್ ಸೇವೆಯಿಲ್ಲದೇ ಪರದಾಡುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಸರಿಯಾದ ವೈದ್ಯಕೀಯ ಆರೈಕೆಯಿಲ್ಲದೇ ಕಂಗೆಟ್ಟಿದ್ದಾರೆ.
ಹಂದನಕೆರೆ ಗ್ರಾಮಸ್ಥರು ಹಾಗೂ ಸಬ್ಬೆನಹಳ್ಳಿ ಡಿಎಸ್ಎಸ್ ತಾಲೂಕು ಸಂಚಾಲಕ ವಸಂತ್ ಅವರು ಈ ಬಗ್ಗೆ ತಕ್ಷಣವೇ ಸರ್ಕಾರ ಕ್ರಮಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ.
ಹಂದನಕೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ್ಯಂಬುಲೆನ್ಸ್ ಸೇವೆ ಇಲ್ಲ. ಜನರು ಈ ಬಗ್ಗೆ ಪ್ರಶ್ನಿಸಿದ್ರೆ, ಆ್ಯಂಬುಲೆನ್ಸ್ ನ ಟೈರ್ ಕೆಟ್ಟು ಹೋಗಿದೆ ಅಂತ ನಿರ್ಲಕ್ಷ್ಯದ ಉತ್ತರ ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆ್ಯಂಬುಲೆನ್ಸ್ ಸಮಸ್ಯೆ ಬಗ್ಗೆ ತಾಲೂಕು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನಗಳಾಗಿಲ್ಲ. ಸಂಬಂಧಪಟ್ಟ ಮೇಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಎಂದು ಹಂದನಕೆರೆ ಗ್ರಾಮಸ್ಥರು ಹಾಗೂ ಸಬ್ಬೆನಹಳ್ಳಿ ಡಿಎಸ್ಎಸ್ ತಾಲೂಕು ಸಂಚಾಲಕ ವಸಂತ್ ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296