ತುಮಕೂರು: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ(10+1) ಘಟಕಗಳನ್ನು ಸ್ಥಾಪಿಸಲು ಸಹಾಯಧನಕ್ಕಾಗಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಬೆಂಗಳೂರಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿಸಿಕೊಂಡಿದ್ದು, ತುಮಕೂರು ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರಬೇಕು. 18 ರಿಂದ 60 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಕುರಿಭವನ, ಪಶು ಆಸ್ಪತ್ರೆ ಆವರಣ, ಕುಣಿಗಲ್ ರಸ್ತೆ, ತುಮಕೂರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q