ಸರಗೂರು: ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ–ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಎಂದರು.
ತಾಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಸಂವಿಧಾನ ಸಮರ್ಪಕದಿನಾಚರಣೆ ಹಮ್ಮಿಕೊಂಡಿದ್ದು ಅಂಬೇಡ್ಕರ್ ರವರು ಹಾಗೂ ಸಂವಿಧಾನ ಪೀಠಿಕೆ ಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.
ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ, ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂದು ತಿಳಿಸಿದರು.
ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾತನಾಡಿ, ದೇಶದಲ್ಲಿ ಕೋಮು ಭಾವನೆ, ಪ್ರಜಾಪ್ರಭುತ್ವದ ಅಣಕ, ಸಂವಿಧಾನ ವಿರೋಧಿ ಹೇಳಿಕೆಗಳು ಬರುತ್ತಿವೆ. ಇಂತಹ ಹೇಳಿಕೆ ನೀಡುವವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಲು ಸರಕಾರಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂವಿಧಾನ ಉಳಿವಿಗಾಗಿ ಭಾರಿ ಹೋರಾಟಗಳೇ ಆರಂಭವಾಗಿ ಇಡೀ ದೇಶ ಕತ್ತಲ ಕೂಪಕ್ಕೆ ತಳ್ಳಲ್ಪಡುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮಾತನಾಡಿ, ಸಂವಿಧಾನದ ಮೂಲ ಆಶಯಗಳು ಮತ್ತು ಕಾನೂನು ಅಂಶಗಳನ್ನು ಶೇ.75 ಭಾಗದಷ್ಟು ಮಂದಿ ತಿಳಿದುಕೊಳ್ಳದೇ ಇರುವುದರಿಂದ ಸರಕಾರಗಳು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದೆ. ಆ ಮುಲಕ ವಿದ್ಯಾರ್ಥಿ-ಯುವ ಸಮುದಾಯಗಳಿಗೆ ಸಂವಿಧಾನ ಓದುವ, ಚರ್ಚಿಸುವ, ವಿಚಾರ ಸಂಕಿರಣಗಳನ್ನು ಆಯೋಜಿಸಬೇಕೆಂದು ಒತ್ತಾಯಿಸಿದರು.
ಭಾರತದ ಸಂವಿಧಾನ ದಿನ. ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲು ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪಪಂ ಸದಸ್ಯರು ಉಮಾ ರಾಮಚಂದ್ರ, ಚೆಲುವ ಕೃಷ್ಣ, ಚೈತ್ರ ಸ್ವಾಮಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಮುಖಂಡರು ಪುಟ್ಟ ಹನುಮಯ್ಯ,ಗ್ರಾಮೀಣ ಮಹೇಶ್,ಕರ್ನಾಟಕ ಭೀಮಾ ಸೇನೆ ತಾಲೂಕು ಅಧ್ಯಕ್ಷ ಮಹೇಂದ್ರ, ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಮಹದೇವಸ್ವಾಮಿ, ಸಣ್ಣಸ್ವಾಮಿ, ಆರೋಗ್ಯ ಇಲಾಖೆ ಆಡಳಿತಾಧಿಕಾರಿ ಪಾರ್ಥಸಾರಥಿ, ಉಪತಹಸೀಲ್ದಾರ್ ಸುನೀಲ್, ರವೀಂದ್ರ, ಉಪವಿಭಾಗ ಕಬಿನಿ ನೀರಾವರಿ ಇಲಾಖೆ ಎಇಇ ಕೆ ಉಷಾ,ಗೋವಿಂದರಾಜು, ಇನ್ನೂ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q