ಕೇರಳ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೇರಳದ ವಯನಾಡ್‌ನಿಂದ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅವರು, ಇಂದು ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ತಾಯಿ ಸೋನಿಯಾ ಮತ್ತು ಸಹೋದರ ರಾಹುಲ್ ಅವರ ಸಮ್ಮುಖದಲ್ಲಿ ಅವರು ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನಾಂದೇಡ್ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್ (ಕಾಂಗ್ರೆಸ್) ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದು, ಅವರು ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q