nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನಕ್ಕೆ ಬೆದರಿಕೆ: ಪೇಜಾವರ ಶ್ರೀ ಮನವಿ ವಿರುದ್ಧ ಸರಗೂರು ಶಿವಣ್ಣ ಆಕ್ರೋಶ
    ಜಿಲ್ಲಾ ಸುದ್ದಿ November 28, 2024

    ಸಂವಿಧಾನಕ್ಕೆ ಬೆದರಿಕೆ: ಪೇಜಾವರ ಶ್ರೀ ಮನವಿ ವಿರುದ್ಧ ಸರಗೂರು ಶಿವಣ್ಣ ಆಕ್ರೋಶ

    By adminNovember 28, 2024No Comments2 Mins Read
    sargur

    ಸರಗೂರು: ಸಂವಿಧಾನ ಬದಲಾಯಿಸಬೇಕು ಎಂದು ಪೇಜಾವರ ಶ್ರೀ ಮತ್ತು ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ‌ ಹಾಗೂ ಕಳವಳಕಾರಿ ಮಾತ್ರವಲ್ಲ, ಸಂವಿಧಾನಕ್ಕೆ ಬೆದರಿಕೆ ಎಂದು ವಿಧಾನ ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಆಗ್ರಹಿಸಿದರು.

    ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಗುರುವಾರದಂದು  ಪತ್ರಿಕೆ ಪ್ರಕಟನೆಯಲ್ಲಿ ತಿಳಿಸಿ ಮಾತನಾಡಿದರು.

    ಸಂವಿಧಾನ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಕೈಗೊಳ್ಳಬೇಕು. ಮನುವಾದಿಗಳ ಸಂಖ್ಯೆ ಹೆಚ್ಚದಂತೆ ನೋಡಿಕೊಳ್ಳಬೇಕು. ಮಠಗಳಲ್ಲಿ ಪಂಕ್ತಿಭೇದ ಮಾಡುವವರು ಪ್ರಜೆಗಳನ್ನು ಸಮಾನವಾಗಿ ಕಾಣುವುದಿಲ್ಲ. ಅಸ್ಪೃಶ್ಯತೆ ಪಾಲನೆ, ಮೌಢ್ಯ ಬಿತ್ತುವ ಸ್ವಾಮೀಜಿಗಳು ಸಂವಿಧಾನದ ವಿರುದ್ಧ ಮಾತನಾಡದಂತೆ ತಾಕೀತು ಮಾಡಬೇಕು’ ಎಂದು  ಖಂಡಿಸಿದರು.

    ಸಮಾಜ ಸುಧಾರಕರ ಆಶಯಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ ‘ಸರ್ವ ಧರ್ಮ, ಸಹಬಾಳ್ವೆಯ ತಿರುಳಿರುವ ಸಂವಿಧಾನದ ಬದಲಾವಣೆಗೆ ಒತ್ತಾಯಿಸಿರುವ ಪೇಜಾವರ ಶ್ರೀಗಳು, ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷ್ಟಪಡಿಸಲಿ. ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಇದರ ಬದಲಾಗಿ ಪೇಜಾವರ ಅವರು ಯಾವ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ. ದಲಿತರು–ಶೂದ್ರರು ಶ್ರೇಷ್ಠತೆಯ ವ್ಯಸನಕ್ಕೆ ತಲೆಬಾಗಬೇಕೇ? ಮಹಿಳೆಯರು ಅತ್ಯಾಚಾರಿಗಳನ್ನು ಆರಾಧಿಸಬೇಕೆನ್ನುವ ವ್ಯವಸ್ಥೆ ಇರಬೇಕೆ? ಜೀತದಾರರು, ಶ್ರಮಿಕ ವರ್ಗ ಮಾಲೀಕರ ಅಡಿಯಾಳಾಗಿರಬೇಕೇ’ ಎಂದು ಪ್ರಶ್ನಿಸಿದ್ದರು.

    ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿ ಮಾಡಲು ಹೊರಟಿರುವ ಸಂಘ ಪರಿವಾರದ ಗುಪ್ತ ಕಾರ್ಯಸೂಚಿಯನ್ನೇ ಪೇಜಾವರ ಅವರು ಮುಂದುವರಿಸುತ್ತಿದ್ದಾರೆ. ದಲಿತ, ಹಿಂದುಳಿದ, ಶೋಷಿತ ಸಮುದಾಯಗಳು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ-ಘನತೆಯಿಂದ ಬದುಕುಬೇಕಾದ ವ್ಯವಸ್ಥೆ ಇರುವುದು ಸಂವಿಧಾನದಡಿಯಲ್ಲಿ ಮಾತ್ರ’ ಎಂದು ತಿಳಿಸಿದರು.

    ಅಧ್ಯಕ್ಷ ಚನ್ನೀಪುರ ನಾಗರಾಜು, ಮಾತನಾಡಿ ಸಂವಿಧಾನ ಬದಲಾವಣೆಗಾಗಿ ಪೇಜಾವರ ಶ್ರೀಗಳು ಹಾಗೂ ಸಂಘ ಪರಿವಾರಕ್ಕೆ ನಿಷ್ಠರಾಗಿರುವ ಕೆಲವು ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ದುರದೃಷ್ಟಕರ. ಇದು ಸಂವಿಧಾನಕ್ಕೆ ಪರೋಕ್ಷವಾಗಿ ಹಾಕಿರುವ ಬೆದರಿಕೆ ಕೂಡ ಆಗಿದೆ’’ ಎಂದು ಅವರು ತಿಳಿಸಿದರು.

    ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು. ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ನಮ್ಮ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸುತ್ತೇವೆ.

    ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ. ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ.

    ಸಂವಿಧಾನ ವಿರೋಧಿ ಸಂಘಟನೆ ಆರೆಸ್ಸೆಸ್ ನೂರು ವರ್ಷಕ್ಕೆ ಕಾಲಿಡುತ್ತಿರುವುದಕ್ಕೂ ಸಂವಿಧಾನ ಬದಲಾಯಿಸಬೇಕು ಎಂದು ಪರಿವಾರ ನಿಷ್ಠೆಯ ಯತಿಗಳು ಬೀದಿಗಿಳಿದು ಮಾತನಾಡುತ್ತಿರುವುದಕ್ಕೂ ಸಂಬಂಧವಿದೆ. ಯಾರೇ ಬಂದರೂ ಸಂವಿಧಾನವನ್ನು ಬೆಂಬಲಿಸುತ್ತೇವೆ ಎಂದು ಬಂದರೂ ರಾಜ್ಯದಲ್ಲಿ ಅವರಿಗೆ ಉಳಿಗಾಲವಿಲ್ಲ.ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಅಂಬೇಡ್ಕರ್ ಟ್ರಸ್ಟ್ ಗೌರವಾಧ್ಯಕ್ಷ ಮನುಗನಹಳ್ಳಿ ತಿಮ್ಮಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ಧರಾಜು,ಕಸಾಪ ಪ್ರಧಾನ ಕಾರ್ಯದರ್ಶಿ ಗ್ರಾಮೀಣ ಮಹೇಶ್, ದಸಂಸ ಮುಖಂಡ ಲಂಕೆ ಲಕ್ಷ್ಮಣ್, ಇನ್ನೂ ಮುಖಂಡರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ…

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.