nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ದಲಿತ ಸಮುದಾಯಗಳಿಂದ ಒತ್ತಾಯ
    ತುಮಕೂರು November 29, 2024

    ತುಮಕೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ದಲಿತ ಸಮುದಾಯಗಳಿಂದ ಒತ್ತಾಯ

    By adminNovember 29, 2024No Comments2 Mins Read
    kundukorate

    ತುಮಕೂರು: ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಮರ್ಪಣೆ ಮಾಡಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು.

    ನಗರದ ಬಾಲ ಭವನ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು–ಕೊರತೆ ಸಭೆಯಲ್ಲಿ ದಲಿತ ಮುಖಂಡರು ಈ ಒತ್ತಾಯವನ್ನು ಮುಂದಿಟ್ಟರು.

    ಜಿಲ್ಲೆಯ ದಲಿತ ಸಮುದಾಯಗಳು ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮತ್ತು ಜಗಜೀವನ್ ರಾಮ್ ಸಮುದಾಯ ಭವನ ನಿರ್ಮಾಣ ಮಾಡಲು ಅನೇಕ ವರ್ಷಗಳಿಂದ ಸರ್ಕಾರದ ಮುಂದೆ ಬೇಡಿಕೆಯಿಟ್ಟರೂ ಸಹ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂಬ ದಲಿತ ಮುಖಂಡರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಬಾಬು ಜಗಜೀವನ್ ರಾಮ್ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸಮುದಾಯ ಭವನ ನಿರ್ಮಾಣ ಸ್ಥಳಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣ ಇತ್ಯರ್ಥಗೊಂಡ ತಕ್ಷಣವೇ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಮಹಾನಗರ ಪಾಲಿಕೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು, ಶೀಘ್ರವಾಗಿ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

    ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಪ.ಜಾತಿ ಮತ್ತು ಪ.ಪಂಗಡಗಳಿಗೆ ಸ್ಮಶಾನ ಭೂಮಿಯಿಲ್ಲದಿರುವ ಬಗ್ಗೆ ಸಮುದಾಯದ ಮುಖಂಡರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಸ್ಮಶಾನಕ್ಕೆ ಭೂಮಿಯನ್ನು ಮೀಸಲಿಟ್ಟಿದ್ದು, ಸ್ಮಶಾನ ಭೂಮಿ ಅಭಿವೃದ್ಧಿ ಮತ್ತು ಸಂರಕ್ಷಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಪ.ಜಾತಿ ಮತ್ತು ಪ.ಪಂಗಡಗಳ ಜನಸಂಖ್ಯೆ ಕಡಿಮೆ ಇರುವ ಗ್ರಾಮಗಳಲ್ಲಿ ಗುರುತಿಸಲಾಗಿರುವ ಸಾರ್ವಜನಿಕ ಸ್ಮಶಾನದಲ್ಲಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯಗಳ ಶವ ಸಂಸ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ತುಮಕೂರು ತಾಲ್ಲೂಕಿನ ಬಿಟ್ಟನಕುರಿಕೆ ಗ್ರಾಮದಲ್ಲಿ ಪ.ಜಾತಿ ಮತ್ತು ಪ.ಪಂಗಡದವರಿಗೆ ಸರ್ಕಾರದಿಂದ ಮಂಜೂರಾದ ಜಾಗವು ಕೆರೆಯ ಅಂಗಳ ಜಾಗವೆಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಸೂಕ್ತ ತನಿಖೆ ನಡೆಸಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಜಯಣ್ಣ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಇತ್ಯರ್ಥಗೊಳಿಸುವಂತೆ ತಹಶೀಲ್ದಾರ್ ರಾಜೇಶ್ವರಿ ಅವರಿಗೆ ಸೂಚನೆ ನೀಡಿದರು.

    ಸೂರಿಲ್ಲದೆ ಗ್ರಾಮಗಳಲ್ಲಿ ವಾಸಿಸುತ್ತಿರುವ ಪ.ಜಾತಿ ಮತ್ತು ಪ.ಪಂಗಡದ ಸಮುದಾಯದವರಿಗೆ ಆಶ್ರಯ ಯೋಜನೆಯಡಿ ನಿವೇಶನ ಒದಗಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ ಈಗಾಗಲೇ 5000 ನಿವೇಶನಗಳನ್ನು ಗುರುತಿಸಲಾಗಿದ್ದು, ನಿವೇಶನ ಹಂಚಿಕೆ ಸಂದರ್ಭದಲ್ಲಿ ಮೀಸಲಾತಿ ಅಧಾರದ ಮೇಲೆ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಗೆ ಜಿಲ್ಲೆಯ ತುರುವೇಕೆರೆ ತಾಲ್ಲೂಕಿಗೆ ಸಂಬAಧಿಸಿದAತೆ 19, ಗುಬ್ಬಿ-41, ಕೊರಟಗೆರೆ-9, ಕುಣಿಗಲ್-33, ತಿಪಟೂರು-17, ಚಿಕ್ಕನಾಯಕನಹಳ್ಳಿ-11, ಶಿರಾ-29, ಮಧುಗಿರಿ-11, ಪಾವಗಡ-19, ತುಮಕೂರು-34 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾಹಿತಿ ನೀಡಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಆಶೋಕ್, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಆಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ, ಗೌರವ್ ಕುಮಾರ್ ಶೆಟ್ಟಿ, ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ದಲಿತ ಮುಖಂಡರು ಉಪಸ್ಥಿತರಿದ್ದರು.

     

    ಇದನ್ನೂ ಓದಿ: ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆ ದಿನಾಂಕ ಬಗ್ಗೆ ಅಧಿಕಾರಿಗಳಿಂದಲೇ ಗೊಂದಲ ಸೃಷ್ಟಿ! | ಅನುಮಾನಗಳಿಗೆ ಕಾರಣವಾದ ಅಧಿಕಾರಿಗಳ ನಡೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ…

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.