ತುಮಕೂರು: ನಗರದ ಮಹಾನಗರ ಪಾಲಿಕೆ ಮುಂಭಾಗದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಸಮ್ಮೇಳನಾಧ್ಯಕ್ಷರಾದ ಅಗ್ರಹಾರ ಕೃಷ್ಣಮೂರ್ತಿಯವರ ಮೆರವಣಿಗೆ ನಡೆದಿದೆ.
ಈ ಸಂದರ್ಭದಲ್ಲಿ ವಿವಿಧ ಕಲಾತಂಡಗಳು ಕನ್ನಡ ಅಭಿಮಾನಿಗಳು ಸೇರಿದಂತೆ ಅಧಿಕಾರಿ ವರ್ಗ ಮೆರವಣಿಗೆ ಜೊತೆ ಹೆಜ್ಜೆ ಹಾಕಿದ್ದು ನೋಡುಗರ ಗಮನ ಸೆಳೆದಿದೆ.
ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳುವ ಜೊತೆಗೆ ತಮ್ಮ ಕೈಯಲ್ಲಿ ಕನ್ನಡ ಬಾವುಟವನ್ನು ಹಿಡಿದು ಕನ್ನಡ ಪ್ರೇಮ ಸಾರಿದ್ದರೆ, ಮಹಿಳೆಯರು ಪೂರ್ಣ ಕುಂಭದೊಂದಿಗೆ ಸ್ವಾಗತ ಕೋರಿದರು. ಅದ್ದೂರಿಯಾಗಿ ತುಮಕೂರಿನಲ್ಲಿ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ.
ವರದಿ : ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296