ಕೊರಟಗೆರೆ: ನೂತನವಾಗಿ ಶ್ರೀ ಬಲಮುರಿ ಗಣಪತಿ ದೇವಸ್ಥಾನದ ಗರ್ಭಗುಡಿಯ ಮುಖ್ಯದ್ವಾರ ಅನಾವರಣಗೊಳಿಸಲಾಯಿತು.
ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ (ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನುಪಲು ಗ್ರಾಮದಲ್ಲಿ ಸುಮಾರು 45 ಲಕ್ಷಗಳ ವೆಚ್ಚದಲ್ಲಿ ನೂತನವಾಗಿ ಶ್ರೀ ಬಲಮುರಿ ಗಣಪತಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ.
ಸುಮಾರು 60 ವರ್ಷಗಳಿಂದ ಈ ಗ್ರಾಮದಲ್ಲಿ ಒಂದೇ ಒಂದು ದೇವಾಲಯವಿಲ್ಲದೆ ಮೂಲಭೂತ ಸೌಕರ್ಯವಿಲ್ಲದೆ, ಗ್ರಾಮದ ಅಭಿವೃದ್ಧಿ ಇಲ್ಲದೆ ಇದ್ದ ಕುಗ್ರಾಮದಲ್ಲಿ ಇದೀಗ ಸಂತಸದ ವಾತಾವರಣ ನಿರ್ಮಾಣವಾಗಿದೆ.
ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮತ್ತು ಎಲೆರಾಂಪುರ ಮಠದ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ರವರ ಮಾರ್ಗದರ್ಶನದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ.
ಅಕ್ಕ–ಪಕ್ಕದ ಗ್ರಾಮಸ್ಥರಿಂದ ಸ್ಥಳೀಯ ಜನಪ್ರತಿನಿಧಿಗಳಿಂದ ಸಾರ್ವಜನಿಕರ ಸಹಾಯ ಹಸ್ತದಿಂದ ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ.
ಶ್ರೀ ಬಲಮುರಿ ಗಣಪತಿ ದೇವಾಲಯದ ಅಭಿವೃದ್ದಿಗೆ, ದೇವಾಲಯ ಸಂಪೂರ್ಣವಾಗಿ ನಿರ್ಮಿಸಲು ದಾನಿಗಳು ಹೆಚ್ಚಿನ ಧನ ಸಹಾಯ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.
ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx