ಪಾವಗಡ: ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ತಕ್ಷಣ ಕಾರ್ಯಕ್ರಮದ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಹಾಗೂ ಟಿಟಿ ಚಾಲಕ ಹರೀಶ್ ಜರೂರಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ಕಾರು ಮತ್ತು ಟಿಟಿ ಮೂಲಕ ರವಾನಿಸಿ ಯಾವುದೇ ಬಾರಿ ಅವಘಡ ಆಗದಂತೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇವರ ಕಾರ್ಯಕ್ಕೆ ಆಡಳಿತ ವರ್ಗ ಶ್ಲಾಘನೆ ವ್ಯಕ್ತಪಡಿಸಿದೆ.
ಟಿಟಿ ಚಾಲಕ ಹರೀಶ್ ಅವರನ್ನು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಅವರಿಗೆ ಅಧಿಕಾರಿ ವರ್ಗ ಹಾಗೂ ಗ್ರಾಮಸ್ಥರು ಕೃತಜ್ಞತೆ ತಿಳಿಸಿದ್ದಾರೆ.
ಈ ವೇಳೆ ಪಾವಗಡ ತಹಶೀಲ್ದಾರ್ ಡಿ.ಎನ್. ವರದರಾಜು, ಇಓ ಜಾನಕಿ ರಾಮ್, ಬಿಇಓ ಇಂದ್ರಾಣಮ್ಮ, ಅಕ್ಷರ ದಾಸೋಹ ಎ.ಡಿ.ಶಂಕರಪ್ಪ, ಇಸಿಒ ವೇಣು ಗೋಪಾಲ್ ಸೇರಿದಂತೆ ಕೋಣನಕುರಿಕೆ ಗ್ರಾಮಸ್ಥರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx