nammatumakuru

    Subscribe to Updates

    Get the latest creative news from FooBar about art, design and business.

    What's Hot

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026
    Facebook Twitter Instagram
    ಟ್ರೆಂಡಿಂಗ್
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    • ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದಿ ಎಂಬ ಘಟ ಸರ್ಪ ಕನ್ನಡವನ್ನು ನುಂಗಲು ಬಿಡಬಾರದು: ಡಾ.ಅಗ್ರಹಾರ ಕೃಷ್ಣಮೂರ್ತಿ
    ತುಮಕೂರು November 30, 2024

    ಹಿಂದಿ ಎಂಬ ಘಟ ಸರ್ಪ ಕನ್ನಡವನ್ನು ನುಂಗಲು ಬಿಡಬಾರದು: ಡಾ.ಅಗ್ರಹಾರ ಕೃಷ್ಣಮೂರ್ತಿ

    By adminNovember 30, 2024No Comments2 Mins Read
    sahithya sammelana

    ತುಮಕೂರು: ಸ್ವ–ಘೋಷಿತ ರಾಷ್ಟ್ರೀಯ ಭಾಷೆ ಎಂದು ಹೇಳಲಾಗುವ ಹಿಂದಿ ಎಂಬ ಘಟ ಸರ್ಪವು ಕನ್ನಡವನ್ನು ನುಂಗಲು ಬಿಡಬಾರದು ಎಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಅಗ್ರಹಾರ ಕೃಷ್ಣಮೂರ್ತಿ ಕರೆ ಕೊಟ್ಟರು.

    ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಭಾರತದಲ್ಲಿ 11 ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ಪಡೆದರೂ ಸಹ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಬಿಂಬಿಸಲಾಗುತ್ತಿದೆ. ಎಲ್ಲರಿಗೂ ಅವರವರ ಮಾತೃ ಭಾಷೆ ಮಹತ್ವವಾದುದು. ನಮ್ಮ ಭಾಷೆಯನ್ನು ನಾವು ಪ್ರೀತಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದು ತಿಳಿಸಿದರು.


    Provided by
    Provided by

    ಬಹು ಭಾಷಿಕ, ಬಹು ಸಂಸ್ಕೃತಿ, ಬಹು ಸಂಪ್ರದಾಯಗಳನ್ನು ಹೊಂದಿರುವ ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ಸಾವಿರಾರು ವರ್ಷಗಳ ಇತಿಹಾಸವಿದ್ದು, ನಾಡು–ನುಡಿಗಾಗಿ ಹೋರಾಡಿದ ಹೋರಾಟಗಾರರ ಶ್ರಮವನ್ನು ವ್ಯರ್ಥ ಮಾಡಬಾರದು ಎಂದು ತಿಳಿಸಿದರು.

    ಅಭಿವ್ಯಕ್ತಿಗೆ ಧಕ್ಕೆ :

    ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಲೇಖಕರು, ಸಾಹಿತಿಗಳು, ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು ಅಭಿವ್ಯಕ್ತಿಗೊಳಿಸಲೂ ಸಹ ತೊಡಕುಗಳು ಉಂಟಾಗುತ್ತಿವೆ ಎಂದು ಸಮ್ಮೇಳನಾಧ್ಯಕ್ಷರು ಬೇಸರ ವ್ಯಕ್ತಪಡಿಸಿದರು. ಕನ್ನಡ ಭಾಷೆಯಲ್ಲಿ ಇತರೆ ಭಾಷೆಗಳಿಗಿಂತ ಹೆಚ್ಚು ವೈಚಾರಿಕತೆ ಮತ್ತು ವೈಜ್ಞಾನಿಕತೆ ಬಗ್ಗೆ ಸಾಹಿತ್ಯಗಳು ರಚನೆಯಾಗಿರುವುದೇ ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಮರಣ ಸಂಚಿಕೆ ಕಲ್ಪ ಸಂಪದ ಪುಸ್ತಕವನ್ನು ಬಿಡುಗಡೆ ಮಾಡಿದರು.

    ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಅಶ್ವಿಜ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಗೌರವ ಕಾರ್ಯದರ್ಶಿ ಡಾ.ಡಿ.ಎನ್.ಯೋಗೀಶ್ವರಪ್ಪ, ಡಾ.ಕಂಟಲಗೆರೆ ಸಣ್ಣಹೊನ್ನಯ್ಯ, ಮುರುಳಿಕೃಷ್ಣಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ಚೇತನ್, ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಚಾಂದು, ರಾಜಶೇಖರ್, ಜಿಲ್ಲೆಯ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮಕ್ಕೂ ಮುನ್ನ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಪರಿಷತ್ತಿನ ದ್ವಜಾರೋಹಣವನ್ನು ನೆರವೇರಿಸಿದರು. ನಗರದ ಬಿಜಿಎಸ್ ವೃತ್ತದಿಂದ ಗಾಜಿನ ಮನೆಯವರೆಗೆ ಸಮ್ಮೇಳಾನಾಧ್ಯಕ್ಷರಾದ ಡಾ.ಅಗ್ರಹಾರ ಕೃಷ್ಣಮೂರ್ತಿ ದಂಪತಿಗಳನ್ನು ವಿವಿಧ ಕಲಾ ತಂಡಗಳಿಂದ ಮೆರವಣಿಗೆಯ ಮೂಲಕ ಕರೆತರಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಬೆಂಗಳೂರು: ಐದು ವರ್ಷದ (ವರದಿಗಳ ಪ್ರಕಾರ ಆರು ವರ್ಷ) ಮಗಳನ್ನು ಕೊಲೆ ಮಾಡಿದ ಆರೋಪದ ಮೇಲೆ 39 ವರ್ಷದ ಮಹಿಳೆ…

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.