ತುಮಕೂರು: ಹಣ ಅಂತಸ್ತು ಅಥವಾ ಅಧಿಕಾರದಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿಲ್ಲ, ದೇಹವನ್ನು ಸಮತೋಲನದಲ್ಲಿ ಇಟ್ಟುಕೊಂಡಿದ್ದಲ್ಲಿ ಮಾತ್ರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಹಿರೇಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಎಸ್ ವಿ ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಎಸ್ ವಿ ಎಸ್ ಕ್ಲಿನಿಕ್ ಹಾಗೂ ಡಾ.ಸುರೇಶ್ ಬಾಬು ಮತ್ತು ಡಾ.ಹೇಮಾವತಿರವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಆರೋಗ್ಯ ಶಿಬಿರ ಉದ್ಘಾಟಿಸಿ, ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಜಾಗೃತರಾಗಿ ಎಂದು ಆಶೀರ್ವಚನ ನೀಡಿದರು.
ಆಯೋಜಕಾರದ ಡಾ.ಸುರೇಶ್ ಬಾಬು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ರಸ್ತೆಗಳಲ್ಲಿ ಮಾರಾಟ ಮಾಡುವ ಅಂಗಡಿ ತಿನಿಸು, ಜಂಕ್ ಫುಡ್ ಸೇವಿಸುವುದನ್ನು ನಿಲ್ಲಿಸಿ, ಮನೆಯ ಆರೋಗ್ಯಕರ ಆಹಾರವನ್ನು ಸೇವಿಸಿ. ಆಟ, ವ್ಯಾಯಾಮ ಗಳಲ್ಲಿ ಹೆಚ್ಚುತೊಡಗಿಸಿಕೊಂಡು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಸ್ ವಿ ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಧಾ ಹೆಚ್.ಎನ್., ಡಾ.ಭೂಷಣ್ ಕೆ.ಪಿ., ಡಾ.ಪ್ರದೀಪ್, ಸಿಬ್ಬಂದಿ ವರ್ಗದವರು ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಉಚಿತ ಆರೋಗ್ಯ ಶಿಬಿರದಲ್ಲಿ ಸುಮಾರು 300ಕ್ಕೂ ಹೆಚ್ಚು ಫಲಾನುಭವಿಗಳು ಪ್ರಯೋಜನ ಪಡೆದುಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx