ಬೆಂಗಳೂರು: ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಸದಸ್ಯರು ಶೋಕಾಸ್ ನೋಟಿಸ್ ಗೆ ರಾಜ್ಯ ಬಿಜೆಪಿಯ ಸ್ಥಿತಿಯ ಬಗ್ಗೆ ವಿವರ ಸಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರೋಧಿ ಬಣದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಎಕ್ಸ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್ಗೆ ಉತ್ತರ ನೀಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ಪ್ರಸ್ತುತಪಡಿಸುತ್ತೇನೆ ಎಂದಿದ್ದಾರೆ.
ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ ಎಂದು ಯತ್ನಾಳ್ ತಿಳಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


