ಗುಬ್ಬಿ: ವಿದ್ಯುತ್ ಸ್ಪರ್ಶಿಸಿ ಹಾರ್ಡ್ ವೇರ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಎಂ.ಎನ್.ಕೋಟೆ ಗ್ರಾಮದಲ್ಲಿ ನಡೆದಿದೆ.
ಎಂ.ಎನ್.ನಿವಾಸಿ ಪ್ರಕಾಶ್ ಸಿರಿವೆ ಮಾಲಿಕತ್ವದ ಎಂ.ಎನ್.ಕೋಟೆ ಗ್ರಾಮದ ‘ಮಾತೃ ಶ್ರೀ ಹಾರ್ಡ್ ವೇರ್’ ಬೆಂಕಿಗಾಹುತಿಯಾಗಿರುವ ಅಂಗಡಿಯಾಗಿದೆ.
ಬೆಂಕಿಯ ಕೆನ್ನಾಲಿಗೆ ಕಟ್ಟಡಕ್ಕೆ ಬಳಸಲಾಗುವ ವಿವಿಧ ಸಾಮಗ್ರಿ ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಸುಮಾರು 25 ಲಕ್ಷಕ್ಕೂ ಅಧಿಕ ಬೆಲೆಯ ವಸ್ತುಗಳು ಬೆಂಕಿಗಾಹುತಿಯಾಗಿವೆ.
ನಿನ್ನೆ ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಚೇಳೂರು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy