ತುಮಕೂರು: ಇತ್ತೀಚಿನ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದಲ್ಲಿರುವ ವಿಚಾರಗಳಿಗೆ ಮಾತ್ರ ಗಮನವನ್ನು ಹರಿಸುತ್ತಿದ್ದು, ಅದರಂತೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಗಮನ ಕೊಡಬೇಕು ಎಂದು ಡಾ.ಪಿ.ಹೇಮಲತಾ ತಿಳಿಸಿದ್ದಾರೆ.
ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ಐಕ್ಯೂಎಸಿ ಹಾಗೂ ಮ್ಯಾಜಿಕ್ ಬಸ್ ಸಹಯೋಗ ಆಯೋಜನೆ ಮಾಡಿದ್ದ ಆಂತರಿಕ ಗುಣಮಟ್ಟದ ಭರವಸೆ ಸೆಲ್, ಪ್ಲೇಸ್‌ಮೆಂಟ್ ಸೆಲ್ ಹಾಗೂ 5 ದಿನಗಳ ಕೌಶಲ್ಯ ವರ್ಧಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುಸ್ತಕದಲ್ಲಿರುವ ವಿಚಾರಗಳನ್ನು ಮಾತ್ರ ವಿದ್ಯಾರ್ಥಿಗಳು ಗಮನವಹಿಸುತ್ತಿದ್ದಾರೆ, ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳು ಇಲ್ಲದೆ ಇರುವ ವಿಚಾರಗಳು ಸಮಾಜದಲ್ಲಿ ಇದಾವೆ ಅದರ ಬಗ್ಗೆ ಹೆಚ್ಚಿನದಾಗಿ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ತಮ್ಮ ಜೀವನ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾನುಪ್ರಕಾಶ್ ಅವರು ಮಾತನಾಡಿ, ನಾನು ಓದುವಂತಹ ಸಂದರ್ಭದಲ್ಲಿ ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ನಾನು ಸೀಮಿತವಾಗಿರುತ್ತಿದ್ದೆ, ಆದ್ದರಿಂದ ನನಗೆ ಈಗ ಇಂತಹ ವೇದಿಕೆಯಲ್ಲಿ ಮಾತನಾಡಲು ಸಹ ತುಂಬಾ ಕಷ್ಟವಾಗುತ್ತದೆ. ನೀವುಗಳು ಅದೃಷ್ಟವಂತರು ಪದವಿ ಪಡೆಯುವ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿಯ ಬಗ್ಗೆ ಐದು ದಿನಗಳ ಕಾಲ ವಿಶೇಷ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಎಂದರೆ, ಈ ಕಾರ್ಯಕ್ರಮವನ್ನು ಬಳಸಿಕೊಂಡು ಜ್ಞಾನವಂತರಾಗಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಐಕ್ಯೂಎಸಿ ಕೋ–ಆರ್ಡಿನೇಟರ್ ಮತ್ತು ಪ್ಲೇಸ್‌ಮೆಂಟ್ ಅಧಿಕಾರಿ ಸೈಯದ್ ಬಾಬು ಎಚ್.ಬಿ. ಕಾರ್ಯಕ್ರಮದಯನ್ನು ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮ್ಯಾಜಿಕ್ ಬಸ್ ನ ಹಿರಿಯ ತರಬೇತಿ ಅಧಿಕಾರಿ ಸೌಮ್ಯ, ಐಕ್ಯೂಎಸಿ ಸಂಚಾಲಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೆ, BCA ವಿಭಾಗ ಮುಖ್ಯಸ್ಥರಾದ ಶಿವರಂಗಯ್ಯ, ಸೇರಿದಂತೆ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಸಹಾಯಕ ಪ್ರಾಧ್ಯಾಪಕಗಳು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx