ಮೈಸೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ನಡಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಚ್ ಡಿ ಕೋಟೆ ಘಟಕಕ್ಕೆ ಸೇರಿದ ಬಸ್ ಚಲಿಸುತ್ತಿದ್ದ ವೇಳೆಯೇ ಬೆಂಕಿ ಹತ್ತಿಕೊಂಡು ಉರಿದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬಸ್ ನ ಸಿಬ್ಬಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ತಾಂತ್ರಿಕ ದೋಷಗಳಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣಗಳು ಇನ್ನೂ ತಿಳಿದು ಬಂದಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx