nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 57 ವರ್ಷಗಳ ನಂತರ ಖಾಸಗಿ ಕೃಷಿ ಕಾಲೇಜಿಗೆ ಅನುಮತಿ: ಎನ್.ಚಲುವರಾಯಸ್ವಾಮಿ
    ತುರುವೇಕೆರೆ December 3, 2024

    57 ವರ್ಷಗಳ ನಂತರ ಖಾಸಗಿ ಕೃಷಿ ಕಾಲೇಜಿಗೆ ಅನುಮತಿ: ಎನ್.ಚಲುವರಾಯಸ್ವಾಮಿ

    By adminDecember 3, 2024No Comments2 Mins Read
    chaluvanarfayan swamy

    ತುರುವೇಕೆರೆ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್ ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

    ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿರುವ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನವರ ನೂತನ ಕೃಷಿ ಮಹಾವಿದ್ಯಾಲಯ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರು, ಉತ್ತಮ ಗುಣಮಟ್ಟದ ಕೃಷಿ ಶಿಕ್ಷಣ ನೀಡಲು ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆ ಮುಂದೆ ಬಂದಿರುವುದು ಮೌಲ್ಯಯುತ ಶಿಕ್ಷಣ ನೀಡುವುದಕ್ಕೆ ಇದು ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.

    2023ರಲ್ಲಿ ಐ.ಸಿ.ಎ.ಆರ್. ರವರು ಖಾಸಗಿ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲು ಇತ್ತೀಚಿಗೆ ಪರಿಷ್ಕೃತ ಮಾನದಂಡಗಳನ್ನು ಪ್ರಕಟಿಸಿದ್ದು, ಸರ್ಕಾರದಿಂದ ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳು ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಪ್ರಾರಂಭಿಸಲು ಅರ್ಜಿ ಕರೆದು ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಸ್ಥಳೀಯ ವಿಚಾರಣಾ ಸಮಿತಿ ಮಾಡಿ ಖಾಸಗಿ ಮಹಾವಿದ್ಯಾಲಯವನ್ನು ಪ್ರಾರಂಭಿಸಲು ಅರ್ಜಿ ಹಾಕಿರುವ ಟ್ರಸ್ಟ್ ಅಥವಾ ಸೊಸೈಟಿಗಳ ಸ್ಥಳ ಪರಿಶೀಲನೆ ಮಾಡಿ ಐ.ಸಿ.ಎ.ಆರ್ ಪರಿಷ್ಕೃತ ಮಾನದಂಡಗಳನ್ನು ಅಳವಡಿಸಿಕೊಂಡ ಹಿನ್ನಲೆ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗೆ ಖಾಸಗಿ ಕೃಷಿ ವಿಜ್ಞಾನ ಕಾಲೇಜು ಆರಂಭಿಸಲು ಅನುಮತಿ ದೊರೆತಿದೆ ಎಂದು ಕೃಷಿ ಸಚಿವರು ತಿಳಿಸಿದರು.
    ಸರ್ಕಾರದ ಆದೇಶದಂತೆ ಮೆರಿಟ್ ಆಧಾರದ ಮೇರೆಗೆ ಶೇಕಡಾ 60ರಷ್ಟಿನ ಸೀಟುಗಳನ್ನು ಸಿ.ಇ.ಟಿ ಯಿಂದ ಹಾಗೂ ಶೇಕಡಾ 40ರಷ್ಟಿನ ಸೀಟುಗಳನ್ನು ಮ್ಯಾನೇಜ್ಮೆಂಟ್ ನಿಂದ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದ್ದು,ಪ್ರಾರಂಭದ  ಹಂತದಲ್ಲಿ ಈ ಕೃಷಿ ಕಾಲೇಜುಗಳಿಗೆ 60 ಸೀಟುಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದ್ದು, ನಿಗಧಿತ ವಿದ್ಯಾರ್ಥಿಗಳ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ಮಾಡುವಂತಿಲ್ಲ,ಅಲ್ಲದೇ ಪ್ರವೇಶಾತಿಯಲ್ಲಿ ರೋಸ್ಟರ್ ಪದ್ದತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ಹೇಳಿದರು.

    ನಮ್ಮ ರಾಜ್ಯದಲ್ಲಿ 2013ರಿಂದ ಎಲ್ಲಾ 6 ಕೃಷಿ, ತೋಟಗಾರಿಕೆ ಮತ್ತು ಪಶುಸಂಶೋಧನಾ ವಿಶ್ವವಿದ್ಯಾಲಯಗಳಿಗೆ, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಂತೆ ಸಿಇಟಿ ಮುಖಾಂತರ ಮೆರಿಟ್ ಆಧಾರದ ಮೇರೆಗೆ ಸೀಟುಗಳನ್ನು ಒದಗಿಸಲು ಪ್ರಾರಂಭಿಸಲಾಯಿತು. ಅಂದಿನಿಂದ ಇಂದಿನವರೆಗೂ ಕೃಷಿ ಸ್ನಾತಕ ಪದವಿಯನ್ನು ಕಲಿಯಲು ಇಚ್ಚಿಸುವ ವಿದ್ಯಾರ್ಥಿಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ 23 ಸಾವಿರದಿಂದ ಪ್ರಸ್ತುತ ವರ್ಷಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿಯಲ್ಲಿ ಕೃಷಿ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

    ರಾಜ್ಯದ 6 ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಪದವಿಗೆ ಕೇವಲ 5000 ಸೀಟುಗಳನ್ನು ತುಂಬಲು ಅವಕಾಶವಿದೆ. ಆದರೆ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಕೃಷಿ ಶಿಕ್ಷಣವನ್ನು ವ್ಯಾಸಂಗ ಮಾಡಲು ಅಪೇಕ್ಷಿಸುತ್ತಿರುವುದರಿಂದ ಸಾಮಾಜಿಕ ನ್ಯಾಯವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿರುವ ಹಿನ್ನಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೃಷಿ ವಿಜ್ಞಾನ ಕಾಲೇಜು ಆರಂಭಿಸಲು ಅನುಮತಿ ನೀಡಲಾಗುತ್ತಿದೆ ಎಂದು ಕೃಷಿ ಸಚಿವರು ತಿಳಿಸಿದರು.

    2024–25ನೇ ಶೈಕ್ಷಣಿಕ ವರ್ಷದಿಂದ ಆದಿಚುಂಚನಗಿರಿ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯವು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಾಗಿ ಪ್ರಾರಂಭವಾಗಿ ರಾಜ್ಯದ ಪ್ರತಿಷ್ಠಿತ ಆದಿಚುಂಚನಗಿರಿ ಟ್ರಸ್ಟ್ ಅಡಿಯಲ್ಲಿ ಉತ್ತಮ ಗುಣಮಟ್ಟದ ಉನ್ನತ ಕೃಷಿ ಶಿಕ್ಷಣವನ್ನು ನೀಡಲೆಂದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗುಣಮಟ್ಟದ ಕೃಷಿ ಪದವೀಧರರು ಹೊರ ಬರಬೇಕೆಂದು ಆಶಿಸುವುದಾಗಿ ಸಚಿವರು ಹೇಳಿದರು.

    ಇದೇ ವೇಳೆ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ತೋಟ ಹಾಗು ಜಮೀನಿನಲ್ಲಿ ಬೆಳೆದಿದ್ದ ಹಣ್ಣು ತರಕಾರಿ ಸೇರಿದಂತೆ ಧವಸ, ಧಾನ್ಯಗಳನ್ನು ಸ್ವತಃ ವಿದ್ಯಾರ್ಥಿಗಳೇ ರೈತ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದನ್ನು ಗಮನಿಸಿದ ಕೃಷಿ ಸಚಿವರು, ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿ ಸುರೇಶ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.