ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನ ಟೈರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಸ್ ನಿಲ್ದಾಣದ ಬಳಿ ನಡೆದಿದೆ.
ಅಜಯ್, ಜಿತೇಂದ್ರ ಎಂಬ ಇಬ್ಬರು ಪ್ರಯಾಣಿಕರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಪೋ–33 ಎಜಿಎಸ್ ಲೇಔಟ್ ಹರೇಹಳ್ಳಿಗೆ ಸೇರಿದ ಬಸ್ ಇದಾಗಿದ್ದು, ಐಟಿಪಿಎಲ್ ನಿಂದ ಸಿಲ್ಕ್ ಬೋರ್ಡ್ ಗೆ ಬಸ್ ತೆರಳುತ್ತಿತ್ತು. ಚಲಿಸುತ್ತಿದ್ದ ಬಿಎಂಟಿಸಿ ಬಸ್ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಹೆಚ್ಚಿನ ಅಪಾಯ ಸಂಭವಿಸಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx