ತುಮಕೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ತುಮಕೂರಿನಲ್ಲಿ ವಿವಿಧ ಮಠಾಧೀಶರು ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತುಮಕೂರಿನ ಟೌನ್ ಹಾಲ್ ಸರ್ಕಲ್ ನಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿದ ಐದಕ್ಕೂ ಹೆಚ್ಚು ಮಠಾಧೀಶರು ಹಾಗೂ ಬಿಜೆಪಿ ಶಾಸಕ ಜ್ಯೋತಿ ಗಣೇಶ ಹಾಗೂ ಮಾಜಿ ಶಾಸಕ ಸೊಗಡು ಶಿವಣ್ಣ ಹಾಗೂ ವಿವಿಧ ಹಿಂದೂಪರ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಾನಂದ ಸ್ವಾಮೀಜಿ, ವಿವೇಕಾನಂದ ಆಶ್ರಮದ ವೀರೇಶನಂದ ಶ್ರೀ ಸೇರಿದಂತೆ ಹಲವು ಮಠಾಧೀಶರು ಭಾಗಿಯಾಗಿದ್ದರು.
ನಂತರ ಜಿಲ್ಲಾಧಿಕಾರಿ ಕಚೇರಿ ಇದ್ದರೂ ಜಮಾಯಿಸಿದ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಪೂರಕವಾದ ವ್ಯವಸ್ಥೆ ಆಗಬೇಕಿದೆ ಎಂದು ಆಗ್ರಹಿಸಿದರು.
ಹಿಂದೂಗಳ ಮೇಲೆ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿದ ಸ್ವಾಮೀಜಿಗಳು ಅಂತರಾಷ್ಟ್ರೀಯ ಮಠದಲ್ಲಿ ಈ ಕುರಿತು ಗಂಭೀರ ಚರ್ಚೆಯಾಗಬೇಕಿದೆ. ಅಲ್ಲದೆ ವಿದೇಶಗಳಲ್ಲಿ ಹಿಂದುಗಳ ರಕ್ಷಣೆಗೆ ಪೂರಕ ವ್ಯವಸ್ಥೆ ಲಭ್ಯವಾಗಬೇಕಿದೆ ಎಂದು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿಗೆ ಖಂಡನೀಯ ಪತ್ರ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx